×
Ad

ನಾಳೆಯಿಂದ ಆ.15ರವರೆಗೆ ಹಸಿರು ಮಾರ್ಗದ ಮೆಟ್ರೋ ರೈಲು ಸೇವೆಯಲ್ಲಿ ವ್ಯತ್ಯಯ

Update: 2024-08-12 22:55 IST

ಬೆಂಗಳೂರು: ಹಸಿರು ಮಾರ್ಗದ ನಾಗಸಂದ್ರ ಮತ್ತು ರೇಷ್ಮೆ ಸಂಸ್ಥೆ ನಡುವೆ ಮಂಗಳವಾರದಿಂದ(ಆ.13) ಆ.15ರವರೆಗೆ ಮೆಟ್ರೋ ರೈಲು ಸೇವೆಯಲ್ಲಿ ವ್ಯತ್ಯಯವಾಗಲಿದೆ ಎಂದು ನಮ್ಮ ಮೆಟ್ರೋ ಸೋಮವಾರ ಪ್ರಕಟನೆ ಹೊರಡಿಸಿದೆ.

ನಾಗಸಂದ್ರದಿಂದ ಮಾದಾವರವರೆಗಿನ ರೀಚ್-3ರ ವಿಸ್ತೃತ ಮಾರ್ಗದಲ್ಲಿ ಸಿಗ್ನಲಿಂಗ್ ಪರೀಕ್ಷೆಗಳನ್ನು ನಡೆಸಬೇಕಾಗಿರುವುದರಿಂದ, ಪೀಣ್ಯ ಇಂಡಸ್ಟ್ರಿ ಹಾಗೂ ನಾಗಸಂದ್ರ ಮೆಟ್ರೋ ನಿಲ್ದಾಣಗಳ ನಡುವೆ ರೈಲು ಸಮಯದಲ್ಲಿ ವ್ಯತ್ಯಯವಾಗಲಿದೆ.

ನಾಗಸಂದ್ರ ನಿಲ್ದಾಣದಿಂದ ಆ.13 ಮತ್ತು ಆ.14ರಂದು ಕೊನೆಯ ರೈಲು ಸೇವೆಯು ರಾತ್ರಿ 11.05 ಗಂಟೆಯ ಬದಲಾಗಿ 10 ಗಂಟೆಗೆಕೊನೆಗೊಳ್ಳುತ್ತದೆ. ಆ.14 ಮತ್ತು ಆ.15ರಂದು ನಾಗಸಂದ್ರದಿಂದ ಮೊದಲ ರೈಲುಸೇವೆಯು ಬೆಳಿಗ್ಗೆ 5ಗಂಟೆಗೆ ಬದಲಾಗಿ 6ಕ್ಕೆ ಪ್ರಾರಂಭವಾಗುತ್ತದೆ.

ಪೀಣ್ಯ ಇಂಡಸ್ಟ್ರಿಯಿಂದ ರೇಷ್ಮೆ ಸಂಸ್ಥೆ ಮೆಟ್ರೋ ನಿಲ್ದಾಣಗಳ ನಡುವೆ ಆ.13 ಮತ್ತು ಆ.14ರಂದು ರಾತ್ರಿ 11.12 ಗಂಟೆಯ ವರೆಗೆ ಕೊನೆಯ ರೈಲುಸೇವೆ ಲಭ್ಯವಿರುತ್ತದೆ. ಆ.14 ಮತ್ತು ಆ.15ರಂದು ಬೆಳಗ್ಗೆ 5ಗಂಟೆಗೆ ಪ್ರಾರಂಭವಾಗುತ್ತದೆ. ನೇರಳೆ ಮಾರ್ಗದ ಮೆಟ್ರೋ ಸೇವೆಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಪ್ರಕಟನೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News