ಬೆಂಗಳೂರು : ಭಾರತದ ಮೊದಲ ಗೃಹ ಸಚಿವ ಹಾಗೂ ಉಕ್ಕಿನ ಮನುಷ್ಯ ಎಂದೇ ಪ್ರಸಿದ್ಧರಾದ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 151ನೆ ಜನ್ಮದಿನದ ಅಂಗವಾಗಿ ರಾಷ್ಟ್ರೀಯ ಏಕತಾ ದಿವಸವನ್ನು ಆಚರಿಸಲಾಯಿತು. ಈ ಹಿನ್ನೆಲೆಯಲ್ಲಿ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಸಚಿವಾಲಯದ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ರಾಷ್ಟ್ರೀಯ ಏಕತಾ ಪ್ರತಿಜ್ಞಾ ವಿಧಿ ಬೋಧಿಸಿದರು.

‘ದೇಶದ ಏಕತೆ, ಅಖಂಡತೆ ಮತ್ತು ಭದ್ರತೆಯನ್ನು ಕಾಪಾಡುವಲ್ಲಿ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯನ್ನು ಸ್ಮರಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಈ ಕಾರ್ಯಕ್ರಮದಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿ ಒಗ್ಗಟ್ಟಿನಿಂದ ರಾಷ್ಟ್ರದ ಏಕತೆ ಹಾಗೂ ಸಮಗ್ರತೆಯನ್ನು ಎತ್ತಿಹಿಡಿಯುವ ಸಂಕಲ್ಪ ಮಾಡಿದರು.

ಈ ಸಂದರ್ಭದಲ್ಲಿ ಸರಕಾರದ ಹಿರಿಯ ಅಧಿಕಾರಿಗಳಾದ ಪಂಕಜ್ ಕುಮಾರ್ ಪಾಂಡೆ, ಜಗದೀಶ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಚಿವಾಲಯದ ಸಿಬ್ಬಂದಿ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor