ಎಚ್‍ಡಿಕೆ ಮೇಲೆ ಸರಕಾರ ದ್ವೇಷ ರಾಜಕೀಯ ಮಾಡುತ್ತಿಲ್ಲ : ಎನ್.ಚಲುವರಾಯಸ್ವಾಮಿ
ಬೆಂಗಳೂರು : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಮೇಲೆ ನಮ್ಮ ಸರಕಾರ ಯಾವುದೇ ದ್ವೇಷ ರಾಜಕೀಯ ಮಾಡುತ್ತಿಲ್ಲ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದ್ದಾರೆ.
ಗುರುವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಕೇತಗಾನಹಳ್ಳಿ ಜಮೀನು ಸರ್ವೇ ರಾಜಕೀಯ ಪ್ರೇರಿತ ಎಂಬ ಕುಮಾರಸ್ವಾಮಿ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಎಚ್.ಡಿ.ಕುಮಾರಸ್ವಾಮಿ ಕೇತಗಾನಹಳ್ಳಿ ಜಮೀನು ಸರ್ವೇ ನ್ಯಾಯಾಲಯದ ಆದೇಶದ ಮೇರೆಗೆ ನಡೆಯುತ್ತಿದೆ ಎಂದರು.
ನಮ್ಮ ಸರಕಾರ ಉದ್ದೇಶಪೂರ್ವಕವಾಗಿ ಮಾಡುತ್ತಿಲ್ಲ. ಅಧಿಕಾರ ದುರ್ಬಳಕೆ ಮಾಡಿದ್ದು ಕುಮಾರಸ್ವಾಮಿಯವರು, ಸರಕಾರವಲ್ಲ. ಜಮೀನು ಸರ್ವೇ ಸರಕಾರ ಮಾಡುತ್ತಿಲ್ಲ. ನ್ಯಾಯಾಲಯದ ನಿರ್ದೇಶನದ ಮೇಲೆ ಆಗುತ್ತಿದೆ ಎಂದು ಎನ್.ಚೆಲುವರಾಯಸ್ವಾಮಿ ಹೇಳಿದರು.
ನಾವೆಲ್ಲರೂ ಸಂವಿಧಾನ, ನ್ಯಾಯಾಲಯದಲ್ಲಿ ಭರವಸೆ ಇಟ್ಟುಕೊಂಡು ಕೆಲಸ ಮಾಡುತ್ತಿದ್ದೇವೆ. ಈ ಸರ್ವೇ ಸರಕಾರ ಮಾಡಿದ್ದಲ್ಲ. ಎಚ್.ಡಿ.ಕುಮಾರಸ್ವಾಮಿ ಅವರು ಕೇತಗಾನಹಳ್ಳಿ ಜಮೀನು ಸರ್ವೇ ರಾಜಕೀಯ ಪ್ರೇರಿತ ಎಂದು ಮಾತನಾಡಿದರೆ ಅದು ದುರಂತ ಎಂದು ಎನ್.ಚೆಲುವರಾಯಸ್ವಾಮಿ ತಿಳಿಸಿದರು.