ನೆಲಮಂಗಲ | ಗ್ರಾಮ ಪಂಚಾಯಿತಿ ಸದಸ್ಯನ ಮೇಲೆ ಅಪರಿಚಿತರಿಂದ ಗುಂಡಿನ ದಾಳಿ
Update: 2025-10-26 22:33 IST
ಸಾಂದರ್ಭಿಕ ಚಿತ್ರ | Photo Credit : freepik.com
ಬೆಂಗಳೂರು : ಗ್ರಾಮ ಪಂಚಾಯಿತಿ ಸದಸ್ಯನ ಮೇಲೆ ಅಪರಿಚಿತರು ಗುಂಡಿನ ದಾಳಿ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಇಸ್ಲಾಂಪುರದಲ್ಲಿ ರವಿವಾರ ವರದಿಯಾಗಿದೆ.
ಗ್ರಾಮ ಪಂಚಾಯಿತಿ ಸದಸ್ಯ ಸಲೀಂ ಎಂಬುವರ ಮೇಲೆ ಗುಂಡಿನ ದಾಳಿ ನಡೆದಿದ್ದು, ಈ ಸಂಬಂಧ ನೆಲಮಂಗಲ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಕರಣದ ವಿವರ: ಗ್ರಾಮ ಪಂಚಾಯಿತಿ ಸದಸ್ಯ ಸಲೀಂ, ಮನೆ ಬಳಿ ಮಾತನಾಡುತ್ತ ನಿಂತಿದ್ದ ವೇಳೆಗೆ ಬಂದ ಇಬ್ಬರು ಅಪರಿಚಿತ ವ್ಯಕ್ತಿಗಳಿಂದ ಏಕಾಏಕಿ ಗುಂಡಿನ ದಾಳಿ ನಡೆದಿದೆ. ಆ ಬಳಿಕ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
ದಾಳಿ ವೇಳೆ, ಗ್ರಾಮ ಪಂಚಾಯಿತಿ ಸದಸ್ಯ ಸಲೀಂ ಕೈಗೆ ಗಾಯವಾಗಿದ್ದು, ನೆಲಮಂಗಲದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.