ಬೆಂಗಳೂರು: ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರು ಸುರಕ್ಷಿತವಾಗಿ ತವರಿಗೆ ಮರಳಲು ಅಗತ್ಯವಿರುವ ಎಲ್ಲ ನೆರವು ಒದಗಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭರವಸೆ ನೀಡಿದ್ದಾರೆ.

ನೇಪಾಳದಲ್ಲಿ ದುರಂತದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಕನ್ನಡಿಗರ ಜೊತೆ ವೀಡಿಯೊ ಕರೆ ಮೂಲಕ ಮಾತನಾಡಿದ ಮುಖ್ಯಮಂತ್ರಿ, ಧೈರ್ಯ ಕಳೆದುಕೊಳ್ಳಬೇಡಿ, ನಿಮ್ಮ ಜೊತೆ ನಾವಿದ್ದೇವೆ. ನೀವು ತವರಿಗೆ ಮರಳಲು ಎಲ್ಲಾ ಅಗತ್ಯ ನೆರವು ಒದಗಿಸಲಾಗುವುದು ಎಂದು ಹೇಳಿದರು.

ದಿಲ್ಲಿ ತಲುಪುವ ನೇಪಾಳದಲ್ಲಿ ಸಿಲುಕಿರುವ ಎಲ್ಲಾ ಕನ್ನಡಿಗರಿಗೆ ವಸತಿ ವ್ಯವಸ್ಥೆ ಕಲ್ಪಿಸುವಂತೆ ಹಾಗೂ ಅಲ್ಲಿಂದ ಬೆಂಗಳೂರಿಗೆ ಸುರಕ್ಷಿತವಾಗಿ ಆಗಮಿಸಲು ಅಗತ್ಯ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor