×
Ad

ನ್ಯಾಯಾಂಗ ಬಡಾವಣೆಯ ರಸ್ತೆ, ವೃತ್ತಕ್ಕೆ ಸ್ವಾಮಿ ವಿವೇಕಾನಂದರ ಹೆಸರಿಡುವಂತೆ ನ್ಯಾ. ಡಿ. ಕೃಷ್ಣಪ್ಪ ಮನವಿ

Update: 2024-01-12 22:32 IST

ಬೆಂಗಳೂರು: ಇಂದು ಸ್ವಾಮಿ ವಿವೇಕಾನಂದರದ ಜನ್ಮ ದಿನಾಚರಣೆಯನ್ನು ನ್ಯಾಯಾಂಗ ಬಡಾವಣೆಯಲ್ಲಿ ಆಚರಿಸಿದ್ದು, ಪ್ರತಿಷ್ಠಾನದ ಗೌರವಾಧ್ಯಕ್ಷ ರವಿ ಗೌಡ , ನಿವೃತ್ತ ಜಿಲ್ಲಾ ನ್ಯಾಯಾಧೀಶ  ವಿ.ಜಿ ಸವರ್ಡ್ಕರ್ ಸೇರಿದಂತೆ ಇತರ ನಿವೃತ್ತ ನ್ಯಾಯಾಧೀಶರು ಸಮಾರಂಭದಲ್ಲಿ ಭಾಗಿಯಾಗಿದ್ದರು.

ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಈರಣ್ಣ ಉದ್ಘಾಟಿಸಿದರು. ವಿವೇಕಾನಂದರ ಜನ್ಮದಿನಾಚರಣೆ ಅಂಗವಾಗಿ ದುಡಿಯುವ ವರ್ಗಕ್ಕೆ ಅನ್ನಸಂಪರ್ಪಣೆ ಕಾರ್ಯಕ್ರಮವನ್ನು ಇದೇ ಸಂದರ್ಭದಲ್ಲಿ ಏರ್ಪಡಿಸಲಾಗಿತ್ತು.

ಸಮಾರಂಭದಲ್ಲಿ ಮಾತನಾಡಿದ ನಿವೃತ್ತ ನ್ಯಾಯಾಧೀಶ  ಡಿ.ಕೃಷ್ಣಪ್ಪನವರು ನ್ಯಾಯಾಂಗ ಬಡಾವಣೆಯ ಮೂರನೇ ಅಡ್ಡರಸ್ತೆ ಮತ್ತು ಎಂಟನೇ ಮುಖ್ಯ ರಸ್ತೆಯಲ್ಲಿರುವ ವೃತ್ತಕ್ಕೆ ಸ್ವಾಮಿ ವಿವೇಕಾನಂದ ಅಭ್ಯುದಯ ರಸ್ತೆ ಮತ್ತು ಸ್ವಾಮಿ ವಿವೇಕಾನಂದ ವೃತ್ತ ಎಂದು ಹೆಸರನ್ನು ನಾಮಕರಣ ಮಾಡಬೇಕೆಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಪತ್ರ ಬರೆಯುವುದಾಗಿ ತಿಳಿಸಿದರು.

ಕಾರ್ಯಕ್ರಮದ ಕೊನೆಯಲ್ಲಿ ನಿವೃತ್ತ ಜಿಲ್ಲಾ ನ್ಯಾಯಾಧೀಶ ಮುಚ್ಚಂಡಿಯವರು ಎಲ್ಲರಿಗೂ ವಂದನೆಗಳನ್ನು ಅರ್ಪಿಸಿದರು.

ಸಮಾರಂಭದಲ್ಲಿ ನಿವೃತ್ತ ಜಿಲ್ಲಾ ನ್ಯಾಯಾಧೀಶ ಅಶೋಕ್ ಪೂಜಾರಿ , ಪ್ರತಿಷ್ಠಾನದ ಅಧ್ಯಕ್ಷ ಹೆಚ್ ಎಂ ವೆಂಕಟೇಶ್, ಜಿಲ್ಲಾ ನಿವೃತ್ತ ನ್ಯಾಯಾಧೀಶ ಚಂದ್ರಮಲ್ಲೇಗೌಡ ಇತರರು ಉಪಸ್ಥಿತರಿದ್ದರು.

 

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News