×
Ad

ನಾಸಿಹ್ ಪಬ್ಲಿಕ್ ಶಾಲೆಯ ವಾರ್ಷಿಕೋತ್ಸವ ಆಚರಣೆ

Update: 2024-02-18 21:44 IST

ಬೆಂಗಳೂರು: ಫ್ರೇಜರ್ ಟೌನ್ ನಲ್ಲಿರುವ ನಾಸಿಹ್ ಪಬ್ಲಿಕ್ ಶಾಲೆಯ ವಾರ್ಷಿಕೋತ್ಸವವನ್ನು ರವಿವಾರ ಪುರಭವನದಲ್ಲಿ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಎಸೆಸೆಲ್ಸಿ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ 56 ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಬಿಳ್ಕೋಡುಗೆ ನೀಡಲಾಯಿತು. ವಿಶೇಷವೆಂದರೆ ಒಟ್ಟು 56 ವಿದ್ಯಾರ್ಥಿಗಳ ಪೈಕಿ 10 ಮಂದಿ ಬಾಲಕರು ಹಾಗೂ ಓರ್ವ ಬಾಲಕಿ ಹಾಫಿಝೆ ಕುರ್‌ಆನ್ ಆಗಿದ್ದಾರೆ.

ಕಾರ್ಯಕ್ರಮದಲ್ಲಿ ವಿಶೇಷ ಅತಿಥಿಯಾಗಿ ನಿವೃತ್ತ ಐಎಎಸ್ ಅಧಿಕಾರಿ ಮುಹಮ್ಮದ್ ಸನಾವುಲ್ಲಾ ಭಾಗವಹಿಸಿದ್ದರು. ಅಧ್ಯಕ್ಷೀಯ ನುಡಿಗಳನ್ನು ಶಾಲೆಯ ಸಂಸ್ಥಾಪಕ ಹಾಗೂ ಪ್ರಾಂಶುಪಾಲ ಮೌಲಾನ ಸೈಯದ್ ಶಬ್ಬೀರ್ ಅಹ್ಮದ್ ನದ್ವಿ ಆಡಿದರು.

ಉಪ ಪ್ರಾಂಶುಪಾಲ ಹಾಫಿಝ್ ಸೈಯದ್ ಮುಹಮ್ಮದ್ ಸಲ್ಮಾನ್ ಹುಸೇನಿ, ಮುಖ್ಯೋಪಾಧ್ಯಾಯರಾದ ಮುಹಮ್ಮದ್ ಸಾದಿಕ್, ಸೈಯದ್ ಸಬೀಲ್, ವಿದ್ಯಾರ್ಥಿಗಳು, ಪೋಷಕರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News