×
Ad

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ; ಮಹತ್ವದ ವಿಚಾರಗಳ ಚರ್ಚೆ

Update: 2024-02-26 23:08 IST

ಬೆಂಗಳೂರು: ಕಾಂಗ್ರೆಸ್‌ ಪಕ್ಷದ ಶಾಸಕಾಂಗ ಸಭೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ  ನಗರದ ಮಾನ್ಯತಾ ಟೆಕ್ ಪಾರ್ಕ್ ಹಿಲ್ಟನ್ ಹೋಟೆಲ್ ನಲ್ಲಿ ಸೋಮವಾರ ರಾತ್ರಿ ನಡೆದಿದೆ.

ಸಭೆಯಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಸಚಿವರಾದ ಎಚ್ ಕೆ ಪಾಟೀಲ್, ಡಾ.ಜಿ. ಪರಮೇಶ್ವರ, ಕೆ ಜೆ ಜಾರ್ಜ್, ಕೆ ಎಚ್ ಮುನಿಯಪ್ಪ, ದಿನೇಶ್ ಗುಂಡೂರಾವ್, ಆರ್.ವಿ. ದೇಶಪಾಂಡೆ, ಬೋಸರಾಜ್, ರಾಜ್ಯಸಭೆ ಚುನಾವಣೆ ಅಭ್ಯರ್ಥಿ ಅಜಯ್ ಮಾಕನ್, ಶಾಸಕರು, ಎಂಎಲ್ಸಿಗಳು, ಸಂಸದರು, ಪದಾಧಿಕಾರಿಗಳು ಇದ್ದರು. ಸಭೆ ಆರಂಭದಲ್ಲಿ ಶಾಸಕ ರಾಜ ವೆಂಕಟಪ್ಪ ನಾಯಕ ಅವರ ನಿಧನಕ್ಕೆ ಎರಡು ನಿಮಿಷ ಮೌನಾಚಾರಣೆ ಮೂಲಕ ಶ್ರದ್ಧಾಂಜಲಿ ಸಲ್ಲಿಸಲಾಯಿತು

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News