×
Ad

ನನ್ನ ಹೇಳಿಕೆಯಿಂದ ನೇಹಾ ತಂದೆ-ತಾಯಿಗೆ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್

Update: 2024-04-20 12:31 IST

ಬೆಂಗಳೂರು, ಎ.20: ಹುಬ್ಬಳ್ಳಿಯಲ್ಲಿ ಗುರುವಾರ ನಡೆದ ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಹಗುರವಾದ ಹೇಳಿಕೆಗಳನ್ನು ನೀಡಿಲ್ಲ, ತನಗಿದ್ದ ಮಾಹಿತಿಯನ್ನು ಆಧರಿಸಿ ನಿನ್ನೆ ಹೇಳಿಕೆ ನೀಡಿದ್ದೆ. ತನ್ನ ಮಾತುಗಳಿಂದ ನೇಹಾ ತಂದೆತಾಯಿಗೆ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು, ವೈಯಕ್ತಿಕ ಕಾರಣಗಳಿಗೆ ಆಗಿರುವ ಹತ್ಯೆ ಎಂಬ ತನ್ನ ಹೇಳಿಕೆಗೆ ಗೃಹ ಸಚಿವರು ವಿಷಾದ ವ್ಯಕ್ತಪಡಿಸಿದರು.

ನೇಹಾ ಹಿರೇಮಠ ಕೊಲೆ ಪ್ರಕರಣವನ್ನು ಬಿಜೆಪಿಯವರು ರಾಜಕೀಯಕ್ಕೆ ಬಳಸಿಕೊಳ್ಳುತ್ತಿದ್ದಾರೆ. ತಾನಾಗಲೀ, ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಯಾಗಲೀ ಜವಾಬ್ದಾರಿಯುತ ಸ್ಥಾನಗಳಲ್ಲಿ ಇರುವವರು, ನಾವು ಹಗುರವಾದ ಹೇಳಿಕೆಗಳನ್ನು ನೀಡಿಲ್ಲ. ತನಗಿದ್ದ ಮಾಹಿತಿಯನ್ನು ಆಧರಿಸಿ ನಿನ್ನೆ ಹೇಳಿಕೆ ನೀಡಿದ್ದು, ತನಿಖೆ ನಡೆಯುತ್ತಿದೆ ಮತ್ತು ಅದು ಪೂರ್ತಿಗೊಂಡ ಬಳಿಕ ಸತ್ಯಾಸತ್ಯತೆ ಹೊರಬೀಳಲಿದೆ ಎಂದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News