×
Ad

ಬೆಂಗಳೂರು | ಆಸ್ಪತ್ರೆಯಲ್ಲಿ ಬೆಂಕಿ ಅವಘಡ!

Update: 2024-05-07 19:15 IST

ಬೆಂಗಳೂರು: ಇಲ್ಲಿನ ಯಲಹಂಕ ಸಮೀಪದ ರಾಜಾನುಕುಂಟೆಯ ರಕ್ಷಾ ಆಸ್ಪತ್ರೆಯಲ್ಲಿ ವಿದ್ಯುತ್ ಶಾರ್ಟ್ ಸಕ್ರ್ಯೂಟ್‍ನಿಂದಾಗಿ ಬೆಂಕಿ ಅವಘಡ ಕಾಣಿಸಿಕೊಂಡಿರುವ ಘಟನೆ ಮಂಗಳವಾರ ವರದಿಯಾಗಿದೆ.

ಆಸ್ಪತ್ರೆಯ ಕೆಲ ಕೊಠಡಿಗಳಲ್ಲಿ ಬೆಂಕಿ ಕಾಣಸಿಕೊಂಡ ಪರಿಣಾಮ ಅಲ್ಲಿದ್ದ ರೋಗಿಗಳನ್ನು ಬೇರೊಂದು ಆಸ್ಪತ್ರೆಗೆ ಸಾಗಿಸಲಾಗಿದೆ. ಅದೃಷ್ಟವಶಾತ್ ಯಾವುದೇ ರೀತಿಯ ಪ್ರಾಣಾಪಾಯ ಸಂಭವಿಸಿಲ್ಲ. ಈ ಘಟನೆಯ ಮಾಹಿತಿ ತಿಳಿದು ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ ಎಂದು ಯಲಹಂಕ ಠಾಣೆಯ ಪೊಲೀಸರು ತಿಳಿಸಿದ್ದಾರೆ.

ಶಾಸಕ ಎಸ್.ಆರ್.ವಿಶ್ವನಾಥ್ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಮಾತನಾಡಿದ್ದು, ವಿದ್ಯುತ್ ಶಾರ್ಟ್ ಸಕ್ರ್ಯೂಟ್‍ನಿಂದ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣಕ್ಕೆ ಆಸ್ಪತ್ರೆಯ ರೋಗಿಗಳನ್ನು ಸ್ಥಳಾಂತರಿಸಲಾಗಿದ್ದು, ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿಯನ್ನು ನಂದಿಸಿ ಪರಿಸ್ಥಿತಿಯನ್ನು ಹತೋಟಿಗೆ ತಂದಿರುವುದಾಗಿ ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News