×
Ad

ಬೆಂಗಳೂರು | ಜೆಪಿ ನಡ್ಡಾ, ಬಿವೈ ವಿಜಯೇಂದ್ರ, ಅಮಿತ್ ಮಾಳವಿಯಾಗೆ ಹೈಗ್ರೌಂಡ್ಸ್ ಪೊಲೀಸರಿಂದ ನೋಟಿಸ್

Update: 2024-05-08 19:36 IST

ಪಿ ನಡ್ಡಾ, ಅಮಿತ್ ಮಾಳವಿಯಾ , ವಿಜಯೇಂದ್ರ 

ಬೆಂಗಳೂರು: ಸಾಮಾಜಿಕ ಜಾಲತಾಣವಾದ ‘ಎಕ್ಸ್’ನಲ್ಲಿ ವಿವಾದಿತ ಪೋಸ್ಟ್ ಸಂಬಂಧ ದಾಖಲಾದ ಪ್ರಕರಣದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮತ್ತು ಬಿಜೆಪಿಯ ಐಟಿ ಸೆಲ್ ವಿಭಾಗದ ರಾಷ್ಟ್ರೀಯ ಸಂಚಾಲಕ ಅಮಿತ್ ಮಾಳವೀಯ ಅವರಿಗೆ ನಗರದ ಹೈಗ್ರೌಂಡ್ಸ್ ಠಾಣೆಯ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.

ನೋಟಿಸ್ ತಲುಪಿದ 7 ದಿನಗಳ ಒಳಗೆ ಪ್ರಕರಣದ ತನಿಖಾಧಿಕಾರಿಯ ಮುಂದೆ ಹಾಜರಾಗುವಂತೆ ನೋಟಿಸ್‍ನಲ್ಲಿ ಸೂಚಿಸಲಾಗಿದೆ.

ಕರ್ನಾಟಕದ ಬಿಜೆಪಿಯ ಅಧಿಕೃತ ‘ಎಕ್ಸ್' ಖಾತೆಯಲ್ಲಿ ಆಕ್ಷೇಪಾರ್ಹ ಪೋಸ್ಟ್ ಪ್ರಕಟಿಸಲಾಗಿತ್ತು. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಸ್‍ಸಿ, ಎಸ್‍ಟಿ, ಹಿಂದುಳಿದ ವರ್ಗಗಳ ಹೆಸರಿನ ಮೊಟ್ಟೆಗಳಿರುವ ಗೂಡಿನಲ್ಲಿ ಮುಸ್ಲಿಂ ಹೆಸರಿನ ಮೊಟ್ಟೆ ತಂದಿಟ್ಟು ಪೋಷಿಸುವಂತೆ, ಅದೇ ಮುಸ್ಲಿಂ ಹೆಸರಿನ ಮೊಟ್ಟೆಯಿಂದ ಹೊರಬಂದ ಮರಿ ಕೊನೆಗೆ ಇತರ ಹಕ್ಕಿಗಳನ್ನು ಓಡಿಸುತ್ತಿರುವಂತೆ ಸೂಚಿಸುವ ಕಾರ್ಟೂನ್ ವಿಡಿಯೋವೊಂದನ್ನು ಮೇ 4ರಂದು ಬಿಜೆಪಿ ಕರ್ನಾಟಕ ಹಂಚಿಕೊಂಡಿತ್ತು.

ಈ ವಿವಾದಿತ ಪೋಸ್ಟ್ ವಿರುದ್ಧ ಕೆಪಿಸಿಸಿಯ ಮಾಧ್ಯಮ ಮತ್ತು ಸಂವಹನ ವಿಭಾಗದ ಮುಖ್ಯಸ್ಥ ರಮೇಶ್‍ಬಾಬು ದೂರು ನೀಡಿದ್ದರು. ಇದರನ್ವಯ ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ. ಅಲ್ಲದೇ, ಜೆ.ಪಿ.ನಡ್ಡಾ, ವಿಜಯೇಂದ್ರ, ಅಮಿತ್ ಮಾಳವೀಯ ಅವರಿಗೆ ಮೇ 6ರಂದು ಪೊಲೀಸರು ನೋಟಿಸ್ ಜಾರಿ ಮಾಡಿ ವಿಚಾರಣೆಗೆ ಹಾಜರಾಗಲು ಸೂಚಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News