ಬೆಂಗಳೂರು | ವಿಮಾನ ನಿಲ್ದಾಣದ ಇ-ಮೇಲ್‍ಗೆ ಹುಸಿ ಬಾಂಬ್ ಬೆದರಿಕೆ ಕರೆ : ಪ್ರಕರಣ ದಾಖಲು

Update: 2024-05-08 16:39 GMT

ಬೆಂಗಳೂರು : ನಗರದ ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-1 ಮತ್ತು ಕೆಲವು ವಿಮಾನಗಳಲ್ಲಿ ಬಾಂಬ್ ಇರಿಸಲಾಗಿದೆ ಎಂದು ಹುಸಿ ಬಾಂಬ್ ಬೆದರಿಕೆ ಬಂದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ಬಾಂಬ್ ಬೆದರಿಕೆ ಕಳಿಸಿದ್ದ ಅಪರಿಚಿತ ವ್ಯಕ್ತಿಯ ವಿರುದ್ಧ ಮೇ 2ರಂದು ವಿಮಾನ ನಿಲ್ದಾಣದ ಟರ್ಮಿನಲ್-1ರ ವ್ಯವಸ್ಥಾಪಕಿ ಗೀತಾ ರಾಣಿ ಅವರು ನೀಡಿದ ದೂರಿನನ್ವಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 501(1)(ಬಿ), ಸೆಕ್ಷನ್ 507 ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಪರಿಶೀಲನೆ ನಡೆಸಿ ತನಿಖೆ ಮುಂದುವರೆಸಿರುವುದಾಗಿ ಗೊತ್ತಾಗಿದೆ.

ಎ.29ರಂದು ಬೆಳಗ್ಗೆ ವಿಮಾನ ನಿಲ್ದಾಣದ ಇ-ಮೇಲ್ ಖಾತೆಗೆ, 209.85.218.54 ಐಪಿ ವಿಳಾಸದೊಂದಿಗೆ 666darktriad666@gmail.com ಇಮೇಲ್ ವಿಳಾಸದಿಂದ ‘Terrorzers111’ ಗುಂಪಿನಿಂದ ಬಾಂಬ್ ಬೆದರಿಕೆ ಮೇಲ್ ಬಂದಿದೆ ಎಂದು ದೂರಿನಲ್ಲಿ ದಾಖಲಾಗಿದೆ.

ವಿಮಾನದಲ್ಲಿ ಟೈಂ ಬಾಂಬ್ ಇಡಲಾಗಿದೆ. ಯಾವುದೇ ಸಮಯದಲ್ಲಿ ಸ್ಫೋಟಗೊಳ್ಳಬಹುದು. ಜೊತೆಗೆ, ಗುಂಪಿನಿಂದ ಟರ್ಮಿನಲ್-1ರ ಒಳಗೆ ವಿವಿಧ ಸ್ಥಳಗಳಲ್ಲಿ ಸ್ಫೋಟಕ ವಸ್ತುಗಳನ್ನು ಇರಿಸಲಾಗಿದೆ ಎಂಬುದಾಗಿ ಇ-ಮೇಲ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ತಿಳಿದುಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News