×
Ad

ನನ್ನ ಜನ್ಮದಿನವನ್ನು ಆಚರಿಸಬೇಡಿ: ಡಿ.ಕೆ.ಶಿವಕುಮಾರ್

Update: 2024-05-12 23:22 IST

ಬೆಂಗಳೂರು, ಮೇ 12: ರಾಜ್ಯದಲ್ಲಿ ತೀವ್ರ ಸ್ವರೂಪದ ಬರಗಾಲವಿದೆ. ಮಳೆ, ಬೆಳೆ ಇಲ್ಲದೆ ಜನರು ಬವಣೆ ಪಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಯಾರೂ ನನ್ನ ಜನ್ಮದಿನವನ್ನು ಆಚರಿಸಬಾರದು ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮನವಿ ಮಾಡಿದ್ದಾರೆ.

ರವಿವಾರ ಈ ಸಂಬಂಧ ಪ್ರಕಟಣೆ ನೀಡಿರುವ ಅವರು, ತಮ್ಮ ಜನ್ಮದಿನವಾದ ಮೇ 15ರಂದು ಚುನಾವಣೆ ಪ್ರಚಾರ, ಖಾಸಗಿ ಕಾರ್ಯಕ್ರಮ ನಿಮಿತ್ತ ತಾವು ಉತ್ತರ ಭಾರತ ಪ್ರವಾಸ ಕೈಗೊಳ್ಳುತ್ತಿದ್ದು, ಅಂದು ನಾನು ಯಾರಿಗೂ ಸಿಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

‘ಪಕ್ಷದ ನಾಯಕರು, ಕಾರ್ಯಕರ್ತರು, ಅಭಿಮಾನಿಗಳು, ಬಂಧುಗಳು ಅಂದು ತಮ್ಮನ್ನು ಭೇಟಿ ಮಾಡಲು ಪ್ರಯತ್ನಿಸುವುದು ಬೇಡ. ದಯವಿಟ್ಟು ಯಾರೂ ತಪ್ಪು ತಿಳಿಯಬಾರದು. ತಾವು ಇದ್ದಲ್ಲಿಂದಲೇ ನನ್ನನ್ನು ಆಶೀರ್ವದಿಸಿ, ಹಾರೈಸಿ ಎಂದು ಶಿವಕುಮಾರ್ ಮನವಿ ಮಾಡಿದ್ದಾರೆ.

ಯಾವುದೇ ಕಾರ್ಯಕ್ರಮ ಹಮ್ಮಿಕೊಳ್ಳಬಾರದು. ಕಟೌಟ್, ಪೋಸ್ಟರ್ಸ್ ಹಾಕುವುದಾಗಲಿ, ಮಾಧ್ಯಮಗಳಲ್ಲಿ ಜಾಹೀರಾತು ನೀಡುವುದಾಗಲಿ ಮಾಡಬಾರದು. ನಿಮ್ಮ ಪ್ರೀತಿಯಷ್ಟೇ ನನಗೆ ಸಾಕು. ಅದುವೇ ನನಗೆ ಶ್ರೀರಕ್ಷೆ ಎಂದು ಶಿವಕುಮಾರ್ ತಿಳಿಸಿದ್ದಾರೆ.


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News