×
Ad

ಲೈಂಗಿಕ ದೌರ್ಜನ್ಯ ಪ್ರಕರಣ : ಎಚ್‌.ಡಿ.ರೇವಣ್ಣಗೆ ನಾಳೆ(ಮೇ.17) ಮಧ್ಯಾಹ್ನದವರೆಗೆ ಮಧ್ಯಂತರ ಜಾಮೀನು

Update: 2024-05-16 18:27 IST

ಬೆಂಗಳೂರು : ಹೊಳೆನರಸೀಪುರದಲ್ಲಿ ದಾಖಲಾಗಿರುವ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಎಚ್.ಡಿ.ರೇವಣ್ಣಗೆ ಮಧ್ಯಂತರ ಜಾಮೀನು ಸಿಕ್ಕಿದೆ.

ಜಾಮೀನು ಕೋರಿ ಎಚ್.ಡಿ.ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿದ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಈ ಆದೇಶ ಹೊರಡಿಸಿದೆ. ಹಾಸನದ ಹೊಳೆನರಸೀಪುರದಲ್ಲಿ ದಾಖಲಾಗಿರುವ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ರೇವಣ್ಣ ಅವರು, ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್​ಗೆ ಜಾಮೀನು ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿಯ ವಾದ ಪ್ರತಿವಾದ ಆಲಿಸಿದ ನ್ಯಾಯಾಲಯ​, ಅಂತಿಮವಾಗಿ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಇಬ್ಬರ ಶ್ಯೂರಿಟಿ, 5 ಲಕ್ಷ ರೂ. ಬಾಂಡ್ ಒದಗಿಸುವಂತೆ ಷರತ್ತು ವಿಧಿಸಿ ಮತ್ತೆ ಜಾಮೀನು ಅರ್ಜಿ ವಿಚಾರಣೆಯನ್ನು ನಾಳೆ(ಮೇ.17) ಮಧ್ಯಾಹ್ನ 3 ಗಂಟೆಗೆ ಮುಂದೂಡಿದೆ. 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News