×
Ad

ಬೆಂಗಳೂರು | ಕತ್ತು ಕೊಯ್ದುಕೊಂಡ ಸ್ಥಿತಿಯಲ್ಲಿ ವಿದ್ಯಾರ್ಥಿನಿಯ ಮೃತ ದೇಹ ಪತ್ತೆ

Update: 2024-05-16 22:54 IST

ಬೆಂಗಳೂರು : ಕತ್ತು ಕೊಯ್ದುಕೊಂಡ ಸ್ಥಿತಿಯಲ್ಲಿ ವಿದ್ಯಾರ್ಥಿನಿ ಮೃತದೇಹ ಪತ್ತೆಯಾಗಿರುವ ಘಟನೆ ಸುಬ್ರಹಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಬೃಂದಾವನ ಲೇಔಟ್ ನಿವಾಸಿ ಪ್ರಭುದ್ಯಾ(21) ಸಾವನ್ನಪ್ಪಿರುವ ವಿದ್ಯಾರ್ಥಿನಿ ಎಂದು ಪೊಲೀಸರು ಹೇಳಿದ್ದಾರೆ.

ದ್ವಿತೀಯ ವರ್ಷದ ಬಿಬಿಎ ಪದವಿ ವ್ಯಾಸಂಗ ಮಾಡುತ್ತಿದ್ದ ಪ್ರಭುದ್ಯಾ ಸಾವಿನ ಬಗ್ಗೆ ಪೋಷಕರು ಅನುಮಾನ ವ್ಯಕ್ತಪಡಿಸಿದ್ದಾರೆ. ಹೊರಗೆ ಹೋಗಿದ್ದ ತಾಯಿ ಸೌಮ್ಯಾ ಅವರು ನಿನ್ನೆ ಸಂಜೆ ಮನೆಗೆ ವಾಪಾಸಾದಾಗ ಮಗಳು ಪ್ರಭುದ್ಯಾ ಸ್ನಾನದ ಮನೆಯಲ್ಲಿ ಕತ್ತು ಹಾಗೂ ಕೈ ಕೊಯ್ದ ಸ್ಥಿತಿಯಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿರುವುದು ಗೊತ್ತಾಗಿದೆ.

ಆನಂತರ, ಆಕೆಯನ್ನು ಆಸ್ಪತ್ರೆಗೆ ಕರೆದೊಯ್ದಾಗ ವೈದ್ಯರು ಪರೀಕ್ಷಿಸಿ ಮೃತ ಪಟ್ಟಿರುವುದಾಗಿ ಹೇಳಿದ್ದಾರೆ. ಸುದ್ದಿ ತಿಳಿದು ಸುಬ್ರಹಣ್ಯಪುರ ಠಾಣಾ ಪೊಲೀಸರು ಸ್ಥಳಕ್ಕೆ ಧಾವಿಸಿ ಮನೆಯನ್ನೆಲ್ಲಾ ಪರಿಶೀಲಿಸಿ ಅನುಮಾನಾಸ್ಪದ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News