×
Ad

ದೇವೇಗೌಡರ ಬಲಿ ಪಡೆಯಲು ಸರಕಾರ ಸಂಚು : ಜೆಡಿಎಸ್

Update: 2024-05-19 23:06 IST

ಬೆಂಗಳೂರು : ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಜೀವ ಬಲಿ ಪಡೆಯಲು ರಾಜ್ಯ ಕಾಂಗ್ರೆಸ್ ಸರಕಾರ ಸಂಚು ರೂಪಿಸಿದೆ ಎಂದು ಜೆಡಿಎಸ್ ಗಂಭೀರ ಆರೋಪ ಮಾಡಿದೆ.

ರವಿವಾರ ಈ ಕುರಿತು ಎಕ್ಸ್ ಖಾತೆಯಲ್ಲಿ ಪ್ರತಿಕ್ರಿಯಿಸಿರುವ ಜೆಡಿಎಸ್, ದೇವೆಗೌಡರ ಕುಟುಂಬವನ್ನು ಮುಗಿಸಲು ಕಾಂಗ್ರೆಸ್ ಸರಕಾರ ವ್ಯವಸ್ಥಿತ ಹುನ್ನಾರ ನಡೆಸಿ ಯೋಜಿತವಾಗಿ ಗುರಿ ಮಾಡಿದೆ. ಹೊಂಚು ಹಾಕಿ ಸಂಚು ಮಾಡುವ ಕಾಂಗ್ರೆಸ್ ಪಕ್ಷದ ಅಸಲಿ ಮುಖ ಕಳಚಿ ಕೆಳಕ್ಕೆ ಬಿದ್ದಿದೆ. ಅಂಗೈ ಹುಣ್ಣಿಗೆ ಕನ್ನಡಿ ಬೇಕಿಲ್ಲ.ಹೌದಲ್ಲವೇ ಕಾಂಗ್ರೆಸ್ಸಿಗರೇ? ಎಂದು ಪ್ರಶ್ನಿಸಿದೆ.

ಸಿಡಿ ಶಿವಕುಮಾರ್ ಎಂದು ವ್ಯಂಗ್ಯವಾಡಿದ್ದು, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಪಖ್ಯಾತಿ ತರುವುದು.ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ನಾಯಕತ್ವ ಹಾಳು ಮಾಡುವುದು.ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಮುರಿದು ಬೀಳುವಂತೆ ಮಾಡುವುದು. ದೇವೆಗೌಡರ ಜೀವವನ್ನು ಬಲಿ ಪಡೆಯುವುದು ಇವರ ಸಂಚು ಎಂದು ದೂರಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News