×
Ad

ಕೆಎಸ್ಸಾರ್ಟಿಸಿಗೆ ಉತ್ತರಪ್ರದೇಶ ರಸ್ತೆ ಸಾರಿಗೆ ಸಂಸ್ಥೆಯ ಅಧಿಕಾರಿಗಳ ತಂಡ ಭೇಟಿ

Update: 2024-05-24 22:10 IST

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್ಸಾರ್ಟಿಸಿ)ಗೆ ಉತ್ತರ ಪ್ರದೇಶ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಹೆಚ್ಚುವರಿ ವ್ಯವಸ್ಥಾಪಕ ನಿರ್ದೇಶಕ ಹಾಗೂ ಅಧಿಕಾರಿಗಳ ತಂಡವು ಶುಕ್ರವಾರ ಭೇಟಿ ನೀಡಿದ್ದು, ನಿಗಮದಲ್ಲಿ ಅನುಷ್ಠಾನಗೊಳಿಸಿರುವ ಉಪಕ್ರಮಗಳ ಬಗ್ಗೆ ಅಧ್ಯಯನ ನಡೆಸಿತು.

ಶುಕ್ರವಾರ ಇಲ್ಲಿನ ಮೈಸೂರು ರಸ್ತೆಯ ಸ್ಯಾಟಲೈಟ್ ಬಸ್ ನಿಲ್ದಾಣ ಹಾಗೂ ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಭೇಟಿ ನೀಡಿ ನಿಯಂತ್ರಣ ಕೊಠಡಿಯ ಕಾರ್ಯನಿರ್ವಹಣೆ ಹಾಗೂ ಬಸ್ಸುಗಳ ಕಾರ್ಯಾಚರಣೆಯನ್ನು ಪರಿಶೀಲಿಸಿದರು. ಕೆಂಪೇಗೌಡ ಬಸ್ ನಿಲ್ದಾಣದಲ್ಲಿನ ಇ.ವಿ. ಪವರ್‍ಚಾಜಿರ್ಂಗ್ ಕೇಂದ್ರವನ್ನು ಪರಿಶೀಲಿಸಿ, ವಿದ್ಯುತ್‍ಚಾಲಿತ ವಾಹನಗಳ ಚಾರ್ಜಿಂಗ್ ಹಾಗೂ ನಿರ್ವಹಣೆ ಕುರಿತು ತಾಂತ್ರಿಕ ಮಾಹಿತಿಯನ್ನು ಪಡೆದರು.

ಇದೇ ಸಂದರ್ಭದಲ್ಲಿ ನಿಗಮದ ನಿರ್ದೇಶಕಿ ಡಾ. ನಂದಿನಿದೇವಿಕೆ, ಪ್ರಣತ ಐಶ್ವರ್ಯ, ಮುಖ್ಯಪ್ರಧಾನ ವ್ಯವಸ್ಥಾಪಕ ರಾಜೀವ್ ಆನಂದ ಸೇರಿದಂತೆ ಬೆಂಗಳೂರು ಕೇಂದ್ರೀಯ ವಿಭಾಗ ಹಾಗೂ ನಿಗಮದ ಅಧಿಕಾರಿಗಳು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News