×
Ad

ಸಚಿವ ಡಾ.ಮಹದೇವಪ್ಪ ರಾಜೀನಾಮೆಗೆ ಬಿಜೆಪಿ ಆಗ್ರಹ

Update: 2024-05-27 21:40 IST

ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕೌಂಟೆಂಟ್ ಸೂಪರಿಡೆಂಟ್ ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣದ ನೈತಿಕ ಹೊಣೆ ಹೊತ್ತು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ ರಾಜೀನಾಮೆ ನೀಡುವಂತೆ ಬಿಜೆಪಿ ಆಗ್ರಹಿಸಿದೆ.

ಸೋಮವಾರ ಈ ಕುರಿತು ಎಕ್ಸ್ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ, ಕರ್ನಾಟಕವನ್ನು ಲೂಟಿ ಮಾಡುವುದಕ್ಕೆಂದೆ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರಕಾರ, ಲೂಟಿ ಜತೆಗೆ ಅಧಿಕಾರಿಗಳ ಜೀವವನ್ನು ಬಲಿ ಪಡೆಯುತ್ತಿದೆ ಎಂದು ಆರೋಪಿಸಿದೆ.

ಸಮಾಜ ಕಲ್ಯಾಣ ಇಲಾಖೆಯಲ್ಲಿ ನಡೆದ 187 ಕೋಟಿ ರೂ. ಹಗರಣ ಸಂಬಂಧ ಸಚಿವ ಡಾ.ಎಚ್.ಸಿ. ಮಹದೇವಪ್ಪ ಸೇರಿದಂತೆ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಿರಿಯ ಅಧಿಕಾರಿಗಳ ಹೆಸರು ಬರೆದಿಟ್ಟು ಅಕೌಂಟೆಂಟ್ ಸೂಪರಿಡೆಂಟ್ ಚಂದ್ರಶೇಖರ್ ನೇಣಿಗೆ ಶರಣಾಗಿದ್ದಾರೆ ಎಂದು ಬಿಜೆಪಿ ಹೇಳಿದೆ.

ಹಗರಣದ ಪ್ರಮುಖ ರೂವಾರಿ ಆಗಿರುವ ಸಚಿವ ಎಚ್.ಸಿ.ಮಹದೇವಪ್ಪ ನೈತಿಕ ಹೊಣೆ ಹೊತ್ತು ಕೂಡಲೇ ರಾಜೀನಾಮೆ ನೀಡಬೇಕು. ಹಾಗೂ ಸಿದ್ದರಾಮಯ್ಯ ಅವರು ತಮ್ಮ ಆಪ್ತರೆಂದು ರಕ್ಷಣೆ ಮಾಡುವ ಬದಲು ಕಾನೂನು ಕ್ರಮಕೈಗೊಳ್ಳಬೇಕು ಎಂದು ಬಿಜೆಪಿ ಒತ್ತಾಯಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News