ಕೇಂದ್ರ ಸೇವೆಗೆ ನಿಯೋಜನೆಗೊಂಡ ಐಪಿಎಸ್ ಅಧಿಕಾರಿ ಬಿ.ಎಂ.ಲಕ್ಷ್ಮೀ ಪ್ರಸಾದ್
Update: 2024-05-29 22:45 IST
ಬೆಂಗಳೂರು: ಐಪಿಎಸ್ ಅಧಿಕಾರಿ ಬಿ.ಎಂ.ಲಕ್ಷ್ಮೀ ಪ್ರಸಾದ್ ಅವರನ್ನು ಮುಂದಿನ ನಾಲ್ಕು ವರ್ಷಗಳ ಕಾಲ ಕೇಂದ್ರ ಸೇವೆಗೆ ನಿಯೋಜಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ಐಪಿಎಸ್ ಅಧಿಕಾರಿ ಬಿ.ಎಂ.ಲಕ್ಷ್ಮೀ ಪ್ರಸಾದ್ ಅವರು ಬೆಂಗಳೂರು ನಗರ ಈಶಾನ್ಯ ವಿಭಾಗದ ಉಪ ಪೊಲೀಸ್ ಆಯುಕ್ತರಾಗಿದ್ದರು. ಸದ್ಯ ಮುಂದಿನ ಆದೇಶದವರೆಗೆ ಕೇಂದ್ರ ಸೇವೆಗೆ ನಿಯೋಜಿಸಿ ಸರಕಾರ ಆದೇಶದಲ್ಲಿ ತಿಳಿಸಿದೆ.