×
Ad

ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ಜಿ.ಎಸ್.ಮಂಜುನಾಥ್ ನಾಮನಿರ್ದೇಶನ

Update: 2024-06-24 19:51 IST

ಬೆಂಗಳೂರು: ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ಚಿತ್ರದುರ್ಗದ ಜಿ.ಎಸ್.ಮಂಜುನಾಥ್ ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ನಾಮನಿರ್ದೇಶನ ಮಾಡಿ ರಾಜ್ಯ ಸರಕಾರ ಸೋಮವಾರ ಆದೇಶ ಹೊರಡಿಸಿದೆ.

ಜಿ.ಎಸ್.ಮಂಜುನಾಥ್ ಅವರು ಈ ಹಿಂದೆ ಪೌರ ಕಾರ್ಮಿಕರ ನೌಕರರ ಸಂಘದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದು, ಇದೀಗ ಅವರನ್ನು ನಿಗಮದ ಅಧ್ಯಕ್ಷರನ್ನಾಗಿ ನಾಮನಿರ್ದೇಶನ ಮಾಡಿ ಸಮಾಜ ಕಲ್ಯಾಣ ಇಲಾಖೆಯ ಸರಕಾರದ ಉಪ ಕಾರ್ಯದರ್ಶಿ ಎಂ.ಸುಮಿತ್ರಾ ಅವರು ಆದೇಶ ಹೊರಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News