×
Ad

ಬೆಂಗಳೂರು | ಪಿಜಿಯೊಳಗೆ ನುಗ್ಗಿ ಯುವತಿ ಕತ್ತು ಕೊಯ್ದು ಹತ್ಯೆ

Update: 2024-07-24 18:19 IST

ಬೆಂಗಳೂರು : ಮಹಿಳಾ ಪಿಜಿಯೊಳಗೆ ನುಗ್ಗಿ ಯುವತಿಯೊಬ್ಬಳ ಕತ್ತು ಕೊಯ್ದು ಹತ್ಯೆ ಮಾಡಿರುವ ಘಟನೆ ನಗರದ ಕೋರಮಂಗಲದ ವಿ.ಆರ್.ಲೇಔಟ್‌ನಲ್ಲಿ ವರದಿಯಾಗಿದೆ.

ಬಿಹಾರ ಮೂಲದ ಕೃತಿ ಕುಮಾರಿ(24) ಹತ್ಯೆಯಾದ ಯುವತಿ ಎಂದು ಗುರುತಿಸಲಾಗಿದೆ. ಬೆಂಗಳೂರಿನ ಖಾಸಗಿ ಕಂಪೆನಿಯಲ್ಲಿ ಕೃತಿ ಕುಮಾರಿ ಕೆಲಸ ಮಾಡುತ್ತಿದ್ದರು. ಜು.23ರ ರಾತ್ರಿ 11.50ರ ಸುಮಾರಿಗೆ ಚಾಕು ಹಿಡಿದು ಪಿ.ಜಿ.ಯೊಳಗೆ ನುಗ್ಗಿದ ಆರೋಪಿ, 3ನೇ ಮಹಡಿಯಲ್ಲಿನ ರೂಮಿನ ಸಮೀಪದಲ್ಲೇ ಯುವತಿಯ ಕತ್ತು ಕೊಯ್ದು ಕೊಲೆಗೈದು ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.

ಈ ಘಟನಾ ಸ್ಥಳಕ್ಕೆ ಕೋರಮಂಗಲ ಠಾಣಾ ಪೊಲೀಸರು ಹಾಗೂ ಆಗ್ನೇಯ ವಿಭಾಗದ ಡಿಸಿಪಿ ಸಾರಾ ಫಾತಿಮಾ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಪರಿಚಯಸ್ಥ ವ್ಯಕ್ತಿಯಿಂದಲೇ ಕೃತ್ಯ ನಡೆದಿರುವುದಾಗಿ ಶಂಕಿಸಲಾಗಿದೆ. ಈ ಸಂಬಂಧ ಕೋರಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ಪೂರ್ವ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ರಮಣ್ ಗುಪ್ತಾ, ಈ ಪ್ರಕರಣದ ಕುರಿತು ತನಿಖೆಗಾಗಿ ವಿಶೇಷ ತಂಡ ರಚಿಸಲಾಗಿದ್ದು, ಆರೋಪಿಯ ಬಂಧನದ ಬಳಿಕವಷ್ಟೇ ಕೃತ್ಯದ ಹಿಂದಿನ ಕಾರಣ ತಿಳಿಯಲಿದೆ. ಮೃತ ಯುವತಿ ಮೂಲತಃ ಬಿಹಾರದವರು ಎನ್ನುವ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಪಿ.ಜಿ.ಯ ಸಿಸಿಟಿವಿ ದೃಶ್ಯಗಳನ್ನು ಪರಿಶೀಲನೆ ನಡೆಸಲಾಗುತ್ತಿದೆ. ಹತ್ಯೆಯಾದ ಯುವತಿ ಹಾಗೂ ಆರೋಪಿ ಪರಿಚಿತರಾ?, ಕೃತ್ಯಕ್ಕೆ ಕಾರಣವೇನು ಎಂಬುದು ತನಿಖೆಯ ನಂತರ ತಿಳಿಯಲಿದೆ ಎಂದು ಮಾಹಿತಿ ನೀಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News