ಲೈಂಗಿಕ ದೌರ್ಜನ್ಯ ಪ್ರಕರಣ | ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾ
Update: 2024-07-24 18:33 IST
ಬೆಂಗಳೂರು : ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಹಾಸನ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ನಾಲ್ಕನೇ ಜಾಮೀನು ಅರ್ಜಿ ವಜಾಗೊಂಡಿದೆ.
ಎರಡನೇ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಪ್ರಜ್ವಲ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರು ಅರ್ಜಿ ವಜಾ ಮಾಡಿ ಆದೇಶಿಸಿದ್ದಾರೆ.