ರಾಜ್ಯಪಾಲರನ್ನು ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ
Update: 2024-07-24 23:13 IST
ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ನಿವೇಶನ ಹಂಚಿಕೆ ಅಕ್ರಮ ಸಂಬಂಧ ಪ್ರತಿಪಕ್ಷಗಳು ಉಭಯ ಸದನಗಳಲ್ಲಿ ಅಹೋರಾತ್ರಿ ಧರಣಿಗೆ ಮುಂದಾಗಿರುವ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು , ರಾಜ್ಯಪಾಲರನ್ನು ಭೇಟಿ ಮಾಡಿರುವುದು ಕುತೂಹಲಕ್ಕೆ ಕಾರಣವಾಗಿದೆ.
ಬಧವಾರ ಸಂಜೆ ತಮ್ಮ ಆಪ್ತರೊಂದಿಗೆ ರಾಜಭವನಕ್ಕೆ ತೆರಳಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಅವರನ್ನು ಭೇಟಿ ಮಾಡಿ ಕೆಲಕಾಲ ಸಮಾಲೋಚನೆ ನಡೆಸಿದರು.
ವಾಲ್ಮೀಕಿ ನಿಗಮದ ಅಕ್ರಮ, ಈಡಿ ತನಿಖೆ ಹಾಗೂ ಮುಡಾ ನಿವೇಶನ ಅಕ್ರಮವು ಸೇರಿದಂತೆ ಪ್ರಸಕ್ತ ರಾಜಕೀಯ ಬೆಳವಣಿಗೆಗಳ ಬಗ್ಗೆ ಸಿಎಂ, ರಾಜ್ಯಪಾಲರಿಗೆ ಮಾಹಿತಿ ನೀಡಿದ್ದಾರೆಂದು ಗೊತ್ತಾಗಿದೆ.
ಈ ವೇಳೆ ಸಿಎಂ ರಾಜಕೀಯ ಕಾರ್ಯದರ್ಶಿಯಾಗಿರುವ ಪರಿಷತ್ ಸದಸ್ಯ ಕೆ.ಗೋವಿಂದ ರಾಜು ಹಾಜರಿದ್ದರು.