ಮುಡಾ ಪ್ರಕರಣ | ಸಿಬಿಐ ತನಿಖೆ ಕೋರಿ ಹೈಕೋರ್ಟ್‌ಗೆ ಅರ್ಜಿ!
Update: 2024-09-28 12:35 IST
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದದ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಕೋರಿ ಮೈಸೂರಿನ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
ಅರ್ಜಿಯಲ್ಲಿ ಕೇಂದ್ರ ಗೃಹ ಇಲಾಖೆ, ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ, ಸಿಬಿಐ, ಲೋಕಾಯುಕ್ತ ಪೊಲೀಸರು, ರಾಜ್ಯ ಪೊಲೀಸ್ ಮಹಾ ನಿರ್ದೇಶಕರು, ಸಿದ್ದರಾಮಯ್ಯ ಹಾಗೂ ಅವರ ಪತ್ನಿ ಪಾರ್ವತಿ ಮತ್ತಿರರನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ.
ಇನ್ನಷ್ಟೇ ಅರ್ಜಿ ವಿಚಾರಣೆಗೆ ಬರಬೇಕಾಗಿದೆ. ಪ್ರಕರಣವನ್ನು ರಾಜ್ಯ ಸರಕಾರದ ಪೊಲೀಸರಿಂದ ತನಿಖೆ ನಡೆಸುವುದಕ್ಕೆ ಸಾಧ್ಯವಿಲ್ಲ. ಹೀಗಾಗಿ ಸಿಬಿಐ ತನಿಖೆಗೆ ವಹಿಸಬೇಕು. ಇಲ್ಲವೇ ಹೈಕೋರ್ಟ್ ಹಾಲಿ ನ್ಯಾಯಮೂರ್ತಿಗಳ ಮೇಲ್ವಿಚಾರಣೆಯಲ್ಲಿ ತನಿಖೆಗೆ ಆದೇಶಿಸಬೇಕು ಎಂದು ಅರ್ಜಿಯಲ್ಲಿ ಕೋರಿದ್ದಾರೆ.