×
Ad

ಚಿತ್ರದುರ್ಗ | ಅಡಿಕೆ ತೋಟದಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ಇಬ್ಬರು ಮೃತ್ಯು : ಕಳ್ಳತನಕ್ಕೆ ಬಂದು ಮೃತಪಟ್ಟಿರುವ ಶಂಕೆ

Update: 2024-10-20 15:10 IST

ಚಿತ್ರದುರ್ಗ : ವಿದ್ಯುತ್ ತಂತಿ ಸ್ಪರ್ಶಿಸಿ ಇಬ್ಬರು ಮೃತಪಟ್ಟಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೃಷ್ಣಾಪುರ ಗ್ರಾಮದಲ್ಲಿ ನಡೆದಿದೆ.

ಮದ್ಯಪ್ರದೇಶ ಮೂಲದ ಮೋಹಿತ್(24), ಕತರ್ವ(38) ಮೃತರು ಎಂದು ಗುರುತಿಸಲಾಗಿದೆ. ಕೃಷ್ಣಾಪುರ ಗ್ರಾಮದ ಜಯರಾಂ ಎಂಬುವರ ಅಡಿಕೆ ತೋಟದಲ್ಲಿ ಈ ಘಟನೆ ಸಂಭವಿಸಿದ್ದು, ಮೃತರು ಕಳೆದ ರಾತ್ರಿ ಶ್ರೀಗಂಧ ಕಳ್ಳತನಕ್ಕೆ ಬಂದಿರುವ ಶಂಕೆ ವ್ಯಕ್ತವಾಗಿದೆ. ರಾತ್ರಿ ಕಳ್ಳತನಕ್ಕೆ ತೆರಳಿದ್ದ ವೇಳೆ ವಿದ್ಯುತ್ ಅಘಾತಕ್ಕೊಳಗಾಗಿ ಮೃತಪಟ್ಟಿದ್ದಾರೆ ಎಂದು ಶಂಕಿಸಲಾಗಿದೆ.

ಅಬ್ಬಿನಹೊಳೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ, ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News