ನಾಳೆ ರಾಷ್ಟ್ರೀಯಮಟ್ಟದ ಉನ್ನತ ಶಿಕ್ಷಣ ಸಚಿವರ ಸಮಾವೇಶ :ಏಳು ರಾಜ್ಯಗಳು ಭಾಗಿ
Update: 2025-02-03 22:13 IST
ಬೆಂಗಳೂರು : ವಿಶ್ವವಿದ್ಯಾಲಯ ಅನುದಾನ ಆಯೋಗವು(ಯುಜಿಸಿ) ಕುಲಪತಿಗಳ ನೇಮಕ ಹಾಗೂ ಉನ್ನತ ಶಿಕ್ಷಣ ಸಂಸ್ಥೆಗಳ ಸಂಬಂಧಪಟ್ಟಂತೆ ಹೊರಡಿಸಿರುವ ಕರಡು ನಿಯಮಾವಳಿಗಳ ಕುರಿತು ಚರ್ಚಿಸಲು ನಾಳೆ(ಫೆ.5) ಬೆಂಗಳೂರಿನಲ್ಲಿ ರಾಷ್ಟ್ರೀಯಮಟ್ಟದ ಉನ್ನತ ಶಿಕ್ಷಣ ಸಚಿವರ ಸಮಾವೇಶ ನಡೆಯಲಿದೆ.
ದಿಲ್ಲಿಯಲ್ಲಿ ಚುನಾವಣೆ ಇರುವುದರಿಂದ ದಿಲ್ಲಿಯ ಉನ್ನತ ಶಿಕ್ಷಣ ಸಚಿವರು ಸಮಾವೇಶದಲ್ಲಿ ಪಾಲ್ಗೊಳ್ಳುತ್ತಿಲ್ಲ. ಉಳಿದಂತೆ ಆತಿಥ್ಯ ವಹಿಸಿರುವ ಕರ್ನಾಟಕವೂ ಸೇರಿದಂತೆ ಜಮ್ಮು ಕಾಶ್ಮೀರ, ಹಿಮಾಚಲ್ ಪ್ರದೇಶ, ಜಾರ್ಖಂಡ್, ತೆಲಂಗಾಣ, ತಮಿಳುನಾಡು ಹಾಗೂ ಕೇರಳದ ಉನ್ನತ ಶಿಕ್ಷಣ ಸಚಿವರು ಈ ಸಮಾವೇಶದಲ್ಲಿ ಪಾಲ್ಗೊಳ್ಳುತ್ತಿದ್ದಾರೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.