×
Ad

ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ

Update: 2025-02-12 23:52 IST

ಸಾಂದರ್ಭಿಕ ಚಿತ್ರ | PC : PTI

ಬೆಂಗಳೂರು : ಬಿಜೆಪಿ ಸಂಸದ ಬಸವರಾಜ್ ಬೊಮ್ಮಯಿ ನನ್ನ ಪತ್ರಕ್ಕೆ ಪ್ರತಿಕ್ರಿಯೆ ನೀಡದಿದ್ದರೆ ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಡ್ರೋಣ್ ಬಾಂಬ್ ದಾಳಿ ಮಾಡುವುದಾಗಿ ಬೆದರಿಕೆ ಹಾಕಲಾಗಿದ್ದು, ಈ ಸಂಬಂಧ ಬೆಂಗಳೂರು ಏರ್‌ ಪೋರ್ಟ್ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ.

ಫೆ.8ರಂದು ಇಮೇಲ್ ಮುಖಾಂತರ ಬಾಂಬ್ ಬೆದರಿಕೆ ಹಾಕಿದ್ದು, ಬಿಜೆಪಿ ಸಂಸದ ಬಸವರಾಜ್ ಬೊಮ್ಮಯಿಗೆ ಪತ್ರ ಬರೆದಿದ್ದೇನೆ. ಆ ನನ್ನ ಪತ್ರಕ್ಕೆ ಪ್ರತಿಕ್ರಿಯೆ ಬರದಿದ್ದರೆ ಚೆನ್ನೈ, ಕೇರಳದಿಂದ ಬರುವ ವಿಮಾನಗಳ ಮೇಲೆ ಬೆಂಗಳೂರು ವಿಮಾನ ನಿಲ್ದಾಣದಲ್ಲಿಯೇ ಡ್ರೋಣ್ ಬಾಂಬ್ ದಾಳಿ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ.

ಈ ಸಂಬಂಧ  ಎಫ್‍ಐಆರ್ ದಾಖಲಾಗಿದ್ದು, ಈ ಬಗ್ಗೆ ಪೊಲೀಸರು ತನಿಖೆ ನಡೆಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News