×
Ad

ಸಿದ್ದರಾಮಯ್ಯ ರಾಜ್ಯಕ್ಕೆ ಮಾತ್ರವಲ್ಲ ದೇಶಕ್ಕೆ ಅನಿವಾರ್ಯ : ಶಾಸಕ ಗಣೇಶ್

Update: 2025-02-15 20:36 IST

ಸಿದ್ದರಾಮಯ್ಯ/ಕಂಪ್ಲಿ ಗಣೇಶ್

ಬೆಂಗಳೂರು : ‘ಸಿದ್ದರಾಮಯ್ಯನವರು ಕರ್ನಾಟಕ ರಾಜ್ಯಕ್ಕೆ ಮಾತ್ರವಲ್ಲ, ದೇಶಕ್ಕೆ ಅವರು ಅನಿವಾರ್ಯ. ಅವರೊಬ್ಬ ಮಾದರಿ ರಾಜಕಾರಣಿ. ಅವರ ಬೆಂಬಲಕ್ಕೆ ಕಾಂಗ್ರೆಸ್ ಪಕ್ಷ ಎಲ್ಲ ಶಾಸಕರು ಇದ್ದೇವೆ’ ಎಂದು ಬಳ್ಳಾರಿ ಜಿಲ್ಲೆ ಕಂಪ್ಲಿ ಕ್ಷೇತ್ರದ ಶಾಸಕ ಕಂಪ್ಲಿ ಗಣೇಶ್ ಇಂದಿಲ್ಲಿ ತಿಳಿಸಿದ್ದಾರೆ.

ಶನಿವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಸಿದ್ದರಾಮಯ್ಯನವರಿಂದ ಕಾಂಗ್ರೆಸ್ ಪಕ್ಷಕ್ಕೆ ಅನುಕೂಲ ಆಗಿದೆ. ಇದಕ್ಕೆ ಕಳೆದ ವಿಧಾನಸಭೆ ಚುನಾವಣೆಯೇ ಸಾಕ್ಷಿ. ಬಳ್ಳಾರಿ ಜಿಲ್ಲೆಯ ಐದೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಆಯ್ಕೆಯಾಗಿದ್ದೇವೆ ಎಂದು ವಿವರಣೆ ನೀಡಿದರು.

ಅವರೇ ಇದ್ದರೆ ಒಳಿತು: ಪಕ್ಷದ ವರಿಷ್ಠರು ಹೇಳಿದರೆ ಸಿದ್ದರಾಮಯ್ಯನವರೇ ಐದೂ ವರ್ಷಗಳ ಅವಧಿಗೆ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ. ಅವರು ಮುಂದುವರಿದರೆ ಒಳ್ಳೆಯದು ಎಂದ ಅವರು, ಕೆಪಿಸಿಸಿ ಅಧ್ಯಕ್ಷರ ಹುದ್ದೆಯ ಬಗ್ಗೆ ಹೈಕಮಾಂಡ್ ನಿರ್ಧಾರ ಮಾಡುತ್ತದೆ. ಅದರ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಗಣೇಶ್ ನಿರಾಕರಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News