×
Ad

ಹೊಸ ಪ್ರವಾಸೋದ್ಯಮ ನೀತಿ: ವಾಣಿಜ್ಯ ಸಂಘ-ಸಂಸ್ಥೆಗಳಿಂದ ಮೆಚ್ಚುಗೆ

Update: 2025-02-21 22:24 IST

ಬೆಂಗಳೂರು, ಫೆ.21: ಸರಕಾರ ಇತ್ತೀಚಿಗೆ ಜಾರಿಗೆ ತಂದಿರುವ ಹೊಸ ಪ್ರವಾಸೋದ್ಯಮ ನೀತಿಗೆ ವಾಣಿಜ್ಯೋದ್ಯಮಿಗಳು ಮತ್ತು ವಾಣಿಜ್ಯ ಸಂಘ ಸಂಸ್ಥೆಗಳಿಂದ ಒಕ್ಕೊರಲ ಮೆಚ್ಚುಗೆ ವ್ಯಕ್ತವಾಗಿದೆ.

ಶುಕ್ರವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ವಾಣಿಜ್ಯ ಸಂಘ ಸಂಸ್ಥೆಗಳ ಬಜೆಟ್ ಪೂರ್ವ ಸಭೆಯಲ್ಲಿ ಬಹುತೇಕ ಎಲ್ಲ ವಾಣಿಜ್ಯೋದ್ಯಮಿಗಳು ಹೊಸ ಪ್ರವಾಸೋದ್ಯಮ ನೀತಿಯನ್ನು ಶ್ಲಾಘಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಭಿನಂದಿಸಿದರು.

ಈ ನೀತಿ ಏಕ ಕಾಲಕ್ಕೆ ರಾಜ್ಯದ ಆರ್ಥಿಕತೆ ವೃದ್ಧಿಸುವ ಜೊತೆಗೆ ಉದ್ಯಮಗಳ ಬೆಳವಣಿಗೆಗೂ ಪೂರಕವಾಗಿದೆ ಎಂದು ಸಭೆಯಲ್ಲಿ ವಾಣಿಜ್ಯೋದ್ಯಮಿಗಳು ಸರಕಾರದ ನಿಲುವು ಮತ್ತು ತೀರ್ಮಾನವನ್ನು ಶ್ಲಾಘಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News