×
Ad

ಪತ್ರಕರ್ತರಿಗೆ ಉಚಿತ ಆರೋಗ್ಯ ಯೋಜನೆ ಜಾರಿಗೊಳಿಸಲು ಸಿಎಂಗೆ ಮನವಿ

Update: 2025-02-25 21:31 IST

ಬೆಂಗಳೂರು : ಪತ್ರಕರ್ತರಿಗೆ ಉಚಿತ ಆರೋಗ್ಯ ವಿಮೆ ಯೋಜನೆಯನ್ನು ಆಯವ್ಯಯದಲ್ಲಿ ಘೋಷಿಸಿ, ಜಾರಿಗೊಳಿಸಬೇಕು ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ವು ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಒತ್ತಾಯಿಸಿದೆ.

ಮಂಗಳವಾರ ಈ ಸಂಬಂಧ ಪತ್ರ ಬರೆದಿರುವ ಕೆಯುಡಬ್ಲೂಜೆ ಅಧ್ಯಕ್ಷ ಶಿವಾನಂದ ತಗಡೂರು, ಸದಾ ಒತ್ತಡದಲ್ಲಿ ಕಾರ್ಯನಿರ್ವಹಿಸುವ ಪತ್ರಕರ್ತರು, ಆಸ್ಪತ್ರೆಗಳಿಗೆ ದಾಖಲಾಗುವ ಪ್ರಕರಣಗಳು ಹೆಚ್ಚುತ್ತಿದ್ದು, ಅವರ ಕುಟುಂಬಗಳು ಸಂಕಷ್ಟಕ್ಕೆ ಸಿಲುಕುತ್ತಿವೆ. ಆದ್ದರಿಂದ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಯೋಜನೆಯೊಂದನ್ನು ಜಾರಿಗೆ ತರಬೇಕು ಎಂದು ಕೋರಿದ್ದಾರೆ.

ತುಮಕೂರಿನಲ್ಲಿ ನಡೆದ ಪತ್ರಕರ್ತರ ಸಮ್ಮೇಳನದಲ್ಲಿ ಪತ್ರಕರ್ತರ ಸಂಘದ ಹಕ್ಕೋತ್ತಾಯಕ್ಕೆ ಸ್ಪಂದಿಸಿದ ಸಿಎಂ ಸಿದ್ದರಾಮಯ್ಯ, ಬಜೆಟ್‍ನಲ್ಲಿ ಪತ್ರಕರ್ತರಿಗಾಗಿ ಪ್ರತ್ಯೇಕ ಆರೋಗ್ಯ ಯೋಜನೆ ಜಾರಿಗೊಳಿಸುವ ಭರವಸೆ ನೀಡಿದ್ದರು. ಸರಕಾರಿ ನೌಕರರಿಗೆ ಜಾರಿಗೊಳಿಸಿರುವ ಸಂಜೀವಿನಿ ಆರೋಗ್ಯ ಯೋಜನೆ ಮಾದರಿಯಲ್ಲಿಯೇ ಪತ್ರಕರ್ತರು ಮತ್ತವರ ಕುಟುಂಬಕ್ಕೆ ಆರೋಗ್ಯ ಯೋಜನೆ ಜಾರಿ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

…………………

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News