ಕ್ರೈಸ್ತ ಸಮುದಾಯದ ನಿಯೋಗದಿಂದ ಮುಖ್ಯಮಂತ್ರಿ ಭೇಟಿ
Update: 2025-02-28 17:48 IST
ಬೆಂಗಳೂರು : ಇಂಧನ ಸಚಿವ ಕೆ.ಜೆ.ಜಾರ್ಜ್ ನೇತೃತ್ವದಲ್ಲಿ ಆರ್ಚ್ ಬಿಷಪ್ ಡಾ.ಪೀಟರ್ ಮಚಾದೋ ಅವರನ್ನು ಒಳಗೊಂಡ ಕ್ರೈಸ್ತ ಸಮುದಾಯದ ಧರ್ಮಗುರುಗಳು ಮತ್ತು ಮುಖಂಡರ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಶುಕ್ರವಾರ ಕಾವೇರಿಯಲ್ಲಿ ಭೇಟಿ ಮಾಡಿ, ಶಿಕ್ಷಣ ಸಂಸ್ಥೆಗಳು, ವೈದ್ಯಕೀಯ ಸಂಸ್ಥೆಗಳು ಸೇರಿದಂತೆ ಸಮುದಾಯದ ಅಭಿವೃದ್ಧಿಗೆ ಈ ಬಾರಿಯ ಬಜೆಟ್‍ನಲ್ಲಿ ಹೆಚ್ಚಿನ ಅನುದಾನವನ್ನು ಒದಗಿಸಲು ಮನವಿ ಸಲ್ಲಿಸಿತು.
ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್, ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.