×
Ad

ಗ್ರಾಮೀಣ ಭಾಗದಲ್ಲಿ ಇ-ಖಾತಾ ನೀಡಲು ಸಚಿವ ಸಂಪುಟ ಒಪ್ಪಿಗೆ

Update: 2025-03-14 21:45 IST

ಬೆಂಗಳೂರು : ಗ್ರಾಮಾಂತರ ಪ್ರದೇಶದಲ್ಲಿ ಇ-ಖಾತೆ ನೀಡಲು ಸಂಪುಟ ಒಪ್ಪಿಗೆ ನೀಡಿದ್ದು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಧೇಯಕಕ್ಕೆ ಸಚಿವ ಸಂಪುಟ ಸಭೆ ಅಸ್ತು ಎಂದಿದೆ. ವಿಧೇಯಕ ಅಂಗೀಕರಿಸಿದರೆ ಗ್ರಾಮೀಣ ಭಾಗದ ಕಂದಾಯ ಬಡಾವಣೆ, ಗ್ರಾಮ ಠಾಣಾ ವ್ಯಾಪ್ತಿಯಲ್ಲಿ ಮನೆ, ನಿವೇಶನ ಸಕ್ರಮಕ್ಕೆ ಅವಕಾಶ ನೀಡಿದಂತಾಗುತ್ತದೆ.

ಎಸ್ಸಿ, ಎಸ್ಟಿ, ಓಬಿಸಿ ಹಾಗೂ ಮುಸ್ಲಿಮರಿಗೆ ಗುತ್ತಿಗೆಯಲ್ಲಿ ಮೀಸಲು :

ಪರಿಶಿಷ್ಟ ಜಾತಿ- ಪರಿಶಿಷ್ಟಪಂಗಡ, ಹಿಂದುಳಿದ ವರ್ಗಗಳು ಹಾಗೂ ಮುಸ್ಲಿಂ ಸಮುದಾಯದ ಗುತ್ತಿಗೆದಾರರಿಗೆ 2 ಕೋಟಿ ರೂ. ವೆಚ್ಚದ ಕಾಮಗಾರಿಗಳು, 1 ಕೋಟಿ ರೂ.ವರೆಗಿನ ಸರಕು ಮತ್ತು ಸೇವೆಗಳ ಪೂರೈಕೆಯ ಟೆಂಡರ್‌ನಲ್ಲಿ ಮೀಸಲಾತಿ ಕಲ್ಪಿಸುವ ತೀರ್ಮಾನದ ಜೊತೆಗೆ ಸರಕಾರಿ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇ.4 ರಷ್ಟು ಮೀಸಲಾತಿ ನೀಡಲು ರಾಜ್ಯ ಸಚಿವ ಸಂಪುಟ ಶುಕ್ರವಾರ ಅನುಮೋದನೆ ನೀಡಿದೆ.

ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಮೀಸಲಾತಿ ವಿಚಾರವಾಗಿ ಬಜೆಟ್‌ನಲ್ಲಿ ಘೋಷಣೆ ಮಾಡಿದಂತೆ ಸದನಕ್ಕೆ ವಿಧೇಯಕ ತರಲು ಅನುಮೋದನೆ ನೀಡಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News