×
Ad

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ ಸಿಎಂ

Update: 2025-04-08 17:49 IST

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳಿಗೆ ಅಭಿನಂದನೆಗಳು. ಪರಿಶ್ರಮ ಮತ್ತು ನಿರಂತರ ಅಭ್ಯಾಸ ನಿಮ್ಮನ್ನು ಯಶಸ್ಸಿನ ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾರೈಸಿದ್ದಾರೆ.

ಈ ಸಂಬಂಧ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಾಕಿರುವ ಅವರು, ಪರೀಕ್ಷೆಯಲ್ಲಿ ಅನುತ್ತೀರ್ಣರಾದ ಮಕ್ಕಳು ನಿರಾಶೆ, ಆತಂಕಕ್ಕೆ ಒಳಗಾಗಿ ದುಡುಕಿನ ನಿರ್ಧಾರ ತೆಗೆದುಕೊಳ್ಳುವುದು ಬೇಡ. ಬದುಕು ದೊಡ್ಡದು, ಮತ್ತೆ ಪರೀಕ್ಷೆ ಎದುರಿಸಿ ಹೆಚ್ಚಿನ ಅಂಕದ ಜೊತೆಗೆ ಪಾಸಾಗುವ ಅವಕಾಶ ಖಂಡಿತಾ ಸಿಗಲಿದೆ. ಹತಾಶೆಯ ಕೈಗೆ ಬುದ್ದಿ ಕೊಡದೆ ಸಂಯಮದಿಂದ ವರ್ತಿಸಿ ಎಂದು ಕಿವಿಮಾತು ಹೇಳಿದ್ದಾರೆ.

ವಿವಿಧ ವಿಭಾಗಗಳಲ್ಲಿ ರ್ಯಾಂಕ್ ಪಡೆದಿರುವ ಎಲ್.ಆರ್.ಸಂಜನಾ ಬಾಯಿ, ಅಮೂಲ್ಯ ಕಾಮತ್, ದೀಕ್ಷಾ.ಆರ್ ಹಾಗೂ ದೀಪಶ್ರೀ ಈ ನಾಲ್ವರು ಹೆಣ್ಣುಮಕ್ಕಳಿಗೆ ಹೃದಯಪೂರ್ವಕ ಅಭಿನಂದನೆಗಳು. ನಿಮ್ಮ ಸಾಧನೆ ಇತರರಿಗೆ ಸ್ಪೂರ್ತಿಯಾಗಲಿ ಎಂದು ಮುಖ್ಯಮಂತ್ರಿ ಆಶಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News