×
Ad

ಸರಕಾರದ ವತಿಯಿಂದಲೇ ಭಗವಾನ್ ಬುದ್ದ ಜಯಂತಿ ಆಚರಣೆ

Update: 2025-04-09 21:00 IST

ಬೆಂಗಳೂರು: ಬುದ್ಧ ಪೌರ್ಣಿಮೆಯಂದು ರಾಜ್ಯಾದ್ಯಂತ ಭಗವಾನ್ ಬುದ್ಧರ ಜಯಂತಿಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಆಚರಿಸಲು ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಬುಧವಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸರಕಾರದ ಅಧೀನ ಕಾರ್ಯದರ್ಶಿ ಎಸ್. ಗೀತಾಬಾಯಿ ಈ ಸಂಬಂಧ ಆದೇಶ ಹೊರಡಿಸಿದ್ದು, ಇಲಾಖೆಯ ವತಿಯಿಂದ ಈಗಾಗಲೇ ವಾರ್ಷಿಕ ವಿವಿಧ ಮಹಾಪುರುಷರ 32 ಜಯಂತಿಗಳನ್ನು ಆಚರಿಸಲಾಗುತ್ತಿದೆ. ಇದೀಗ ಭಗವಾನ್ ಬುದ್ಧರ ಜಯಂತಿಯನ್ನು ಸರಕಾರದ ವತಿಯಿಂದ ಆಚರಿಸಲು ಆದೇಶಿಸಿದೆ.

ಅಲ್ಲದೆ, ಬುದ್ಧರ ಜಯಂತಿಯ ಆಚರಣೆಗೆ ತಗಲುವ ವೆಚ್ಚವನ್ನು ಮಹಾಪುರುಷರ ಜಯಂತಿಗಳ ಆಚರಣೆಗೆ 2025-26ನೇ ಸಾಲಿನ ಲೆಕ್ಕಶೀರ್ಷಿಕೆಯಡಿ ಒದಗಿಸಿರುವ ಅನುದಾನದಿಂದ ಭರಿಸತಕ್ಕದ್ದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News