ಬಸವಣ್ಣನನ್ನು ಸ್ಮರಿಸುವುದು ಪ್ರತಿಯೊಬ್ಬ ಕನ್ನಡಿಗನ ಕರ್ತವ್ಯ : ಸಿದ್ದರಾಮಯ್ಯ
Update: 2025-04-30 20:05 IST
ಬೆಂಗಳೂರು: ವಿಶ್ವ ಗುರು ಬಸವಣ್ಣನನ್ನು ಸ್ಮರಿಸುವುದು ಪ್ರತಿಯೊಬ್ಬ ಕನ್ನಡಿಗರ ಹಾಗೂ ಭಾರತೀಯನ ಕರ್ತವ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಬುಧವಾರ ಇಲ್ಲಿನ ಬಸವ ಸಮಿತಿ ಆಯೋಜಿಸಿದ್ದ ವಿಶ್ವ ಗುರು ಬಸವ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸರಕಾರ ಬಸವಣ್ಣ ಅವರಿಗೆ ಕೃತಜ್ಞತೆಯನ್ನು ಸಲ್ಲಿಸುವ ಸಲುವಾಗಿ ಸಾಂಸ್ಕೃತಿಕ ನಾಯಕ ಎಂದು ಗುರುತಿಸಿದೆ. ಬಸವಣ್ಣ ವಿಶ್ವ ಗುರುಗಳಾಗಿದ್ದಾರೆ ಎಂದರು.
ಬಸವಣ್ಣ ಕೇವಲ ಸಾಮಾಜಿಕ ಕ್ರಾಂತಿ ಮಾಡಿದವರಲ್ಲ, ಸಮಾಜದ ಪರಿವರ್ತನೆಗೆ ಇತಿಹಾಸದಲ್ಲಿ ಶಾಶ್ವತವಾಗಿ ನೆಲೆಸುವ, ಜನರ ಮನಸ್ಸಿನಲ್ಲಿ ಅಚ್ಚಳಿಯದೆ ಉಳಿಯುವ ಕೆಲಸವನ್ನು ತಮ್ಮ ಜೀವಿತ ಕಾಲದಲ್ಲಿ ಮಾಡಿದ್ದಾರೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಕಾರ್ಯಕ್ರಮದಲ್ಲಿ ಬಸವ ಸಮಿತಿಯ ಕೆ. ಮೋಹನದೇವ್ ಆಳ್ವ ದತ್ತಿ ಪ್ರಶಸ್ತಿಯನ್ನು ವಚನ ಗಾಯಕ ತೋಟಪ್ಪ ಉತ್ತಂಗಿಗೆ ನೀಡಲಾಯಿತು. ಸಮಿತಿಯ ಅಧ್ಯಕ್ಷ ಅರವಿಂದ ಜತ್ತಿ ಸೇರಿದಂತೆ ಮತ್ತಿತರರು ಇದ್ದರು.