×
Ad

ಕೆಎಸ್ಸಾರ್ಟಿಸಿಗೆ ಮತ್ತೊಂದು ರಾಷ್ಟ್ರೀಯ ಪ್ರಶಸ್ತಿ

Update: 2025-04-30 21:59 IST

ಬೆಂಗಳೂರು : ಅತ್ಯುತ್ತಮ ಸಾರ್ವಜನಿಕ ಸಾರಿಗೆ ಉಪಕ್ರಮದಡಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು(ಕೆಎಸ್ಸಾರ್ಟಿಸಿ) ಫೈನಾನ್ಸಿಯಲ್ ಎಕ್ಸ್ಪ್ರೆಸ್ ಮೊಬಿಲಿಟಿ 2025ರ ರಾಷ್ಟ್ರೀಯ ಪ್ರಶಸ್ತಿಗಳಿಗೆ ಭಾಜನವಾಗಿದೆ.

ನಿಗಮಕ್ಕೆ ಫೈನಾನ್ಸಿಯಲ್ ಎಕ್ಸ್ಪ್ರೆಸ್ ಮೊಬಿಲಿಟಿ ಪ್ರಶಸ್ತಿಯನ್ನು ಅತ್ಯುತ್ತಮ ಸಂಪರ್ಕ, ಸಾರ್ವಜನಿಕ ಲಭ್ಯತೆ ಹಾಗೂ ಉತ್ತಮ ಸಾರ್ವಜನಿಕ ಸಾರಿಗೆ ಸೇವೆಗಾಗಿ ನೀಡಿ ಗೌರವಿಸಲಾಗಿದೆ.

ಬುಧವಾರದಂದು ದಿಲ್ಲಿಯಲ್ಲಿ ನಡೆದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಪ್ರಶಸ್ತಿಗಳನ್ನು ನಿಗಮದ ಮುಖ್ಯ ತಾಂತ್ರಿಕ ಶಿಲ್ಪಿ ಕೆ.ಎಚ್ ಶ್ರೀನಿವಾಸ್ ಅವರಿಗೆ ಪ್ರಧಾನ ಮಾಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News