ರಸ್ತೆ ಅಪಘಾತದಲ್ಲಿ ಎಸ್ಎಸ್‌ಡಿ ರಾಜ್ಯಾಧ್ಯಕ್ಷ ಚನ್ನಕೃಷ್ಣಪ್ಪ ಮೃತ್ಯು
Update: 2025-05-01 01:21 IST
ಬೆಂಗಳೂರು : ರಸ್ತೆ ಅಪಘಾತದಲ್ಲಿ ಕರ್ನಾಟಕ ರಾಜ್ಯ ಸಮತಾ ಸೈನಿಕ ದಳದ ರಾಜ್ಯಾಧ್ಯಕ್ಷ ಬಿ.ಚನ್ನಕೃಷ್ಣಪ್ಪ ಅವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಿಕ್ಕಬಳ್ಳಾಪುರದ ಸಮೀಪ ನಡೆದಿದೆ.
ಮದುವೆ ಕಾರ್ಯಕ್ರಮಕ್ಕೆ ತೆರಳಿ ಬೆಂಗಳೂರು ಹಿಂದಿರುಗುವ ವೇಳೆ ಕಾರಿನ ಚಕ್ರ ಸಿಡಿದ ಪರಿಣಾಮ ಈ ಅವಘಡ ಸಂಭವಿಸಿದ್ದು, ಕಾರಿನಲ್ಲಿದ್ದ ಚನ್ನಕೃಷ್ಣಪ್ಪ ಸ್ಥಳದಲ್ಲೇ ಮೃತಪಟಿದ್ದಾರೆ ಎಂದು ಗೊತ್ತಾಗಿದೆ.
ಕಾರು ಚಲಾಯಿಸುತ್ತಿದ್ದ ಮಹಿಳಾ ವಕೀಲರಿಗೆ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೊಸಕೋಟೆ ತಾಲ್ಲೂಕಿನ ನಂದಗುಡಿ ಹೋಬಳಿಯ ದಳಸಗೆರೆ ಮೂಲದ ಬಿ.ಚನ್ನಕೃಷ್ಣಪ್ಪ ಸುಮಾರು 35 ವರ್ಷಕ್ಕೂ ಹೆಚ್ಚು ಕಾಲ ದಲಿತ ಹೋರಾಟಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು.