×
Ad

ದಲಿತ, ಹಿಂದುಳಿದ ಮಠಗಳಿಗೆ ಅನುದಾನ ನೀಡಲು ಕ್ರಮ : ಸಿಎಂ ಸಿದ್ದರಾಮಯ್ಯ ಭರವಸೆ

Update: 2025-05-04 00:12 IST

ಬೆಂಗಳೂರು : 'ರಾಜ್ಯದಲ್ಲಿನ ದಲಿತ ಮತ್ತು ಹಿಂದುಳಿದ ಮಠಗಳಿಗೆ ಅಗತ್ಯ ಅನುದಾನ ನೀಡಲಾಗುವುದು. ಅಲ್ಲದೆ, ಆ ಸಮುದಾಯದ ಮಠಗಳಿಗೆ ಬೆಂಗಳೂರಿನಲ್ಲಿ ನಿವೇಶನ ನೀಡಲು ಪರಿಶೀಲಿಸಿ ಕ್ರಮ ವಹಿಸಲಾಗುವುದು' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ಶನಿವಾರ ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ಉಪ್ಪಾರ ಸಮಾಜದ ಶ್ರೀ ಪುರುಷೋತ್ತಮಾನಂದ ಸ್ವಾಮೀಜಿ ನೇತೃತ್ವದ ಸ್ವಾಮೀಜಿಗಳ ಹಿಂದುಳಿದ ದಲಿತ ಮಠಾಧೀಶ್ವರರ ಒಕ್ಕೂಟದ ನಿಯೋಗದ ಭೇಟಿ ಮಾಡಿದ ಬಳಿಕ ಮಾತನಾಡಿದ ಅವರು, 'ಹಿಂದುಳಿದ ಮತ್ತು ದಲಿತ ಅರ್ಚಕರನ್ನು ರೂಪಿಸಲು ಅನುಕೂಲ ಆಗುವ ರೀತಿ ಗುರುಕುಲ ಆರಂಭಿಸಲು ಜಾಗ ನೀಡುವಂತೆ ಮನವಿ ಮಾಡಿದ್ದಾರೆ. ಈ ಕುರಿತು ಜಾಗವನ್ನು ಗುರುತಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

ತಲಾ 10 ಕೋಟಿ ರೂ.ಅನುದಾನಕ್ಕೆ ಮನವಿ: ಹಿಂದುಳಿದ, ದಲಿತ ಮಠಾಧೀಶ್ವರರ ಮಠಗಳು, ಸಂಘ, ಟ್ರಸ್ಟ್‌ಗಳಿಗೆ ಶಿಕ್ಷಣ ಸಂಸ್ಥೆ ಹಾಗೂ ಸಮುದಾಯ ಭವನಗಳನ್ನು ನಿರ್ಮಿಸಲು ತಲಾ 10 ಕೋಟಿ ರೂ. ಗಳನ್ನು ನೀಡುವ ಮೂಲಕ ದಲಿತ-ಹಿಂದುಳಿದ ಸಮಾಜಗಳ ಪ್ರಗತಿಗೆ ನೆರವಾಗಬೇಕು ಎಂದು ಒಕ್ಕೂಟ ಆಗ್ರಹಿಸಿದೆ.

ನಿಯೋಗದಲ್ಲಿ ಕಾಗಿನೆಲೆ ಕನಕ ಗುರುಪೀಠದ ಶ್ರೀನಿರಂಜನಾನಂದಪುರಿ ಸ್ವಾಮೀಜಿ, ಭೋವಿಮಠದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಕುಂಚಿಟಿಗ ಮಠದ ಶಾಂತವೀರ ಸ್ವಾಮೀಜಿ, ಉಪ್ಪಾರ ಗುರುಪೀಠದ ಪುರುಷೋತ್ತಮಾನಂದ ಪುರಿ ಸ್ವಾಮೀಜಿ, ವಾಲ್ಮೀಕಿ ಗುರುಪೀಠದ ಪ್ರಸನ್ನನಂದ ಸ್ವಾಮೀಜಿ ಸೇರಿದಂತೆ ಇನ್ನಿತರರು ಹಾಜರಿದ್ದರು 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News