×
Ad

ಆರೋಗ್ಯ ಇಲಾಖೆಯ ಸಿಬ್ಬಂದಿಗಳ ನಿಯೋಜನೆ ರದ್ದುಗೊಳಿಸಿ ಆದೇಶ

Update: 2025-05-10 00:13 IST

ಬೆಂಗಳೂರು : ವೈದ್ಯಕೀಯ ಶಿಕ್ಷಣ ಇಲಾಖೆ ಸೇರಿದಂತೆ ಇತರೆ ಯಾವುದೇ ಇಲಾಖೆಗಳಲ್ಲಿ ನಿಯೋಜನೆ ಮೇಲೆ 5 ವರ್ಷಗಳ ಅವಧಿ ಮೀರಿ ಕರ್ತವ್ಯ ನಿರ್ವಹಿಸುತ್ತಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಎಲ್ಲಾ ಅಧಿಕಾರಿ/ನೌಕರರ ನಿಯೋಜನೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಗೊಳಿಸಿ, ಮಾತೃ ಇಲಾಖೆಗೆ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳುವಂತೆ ರಾಜ್ಯ ಸರಕಾರ ಆದೇಶಿಸಿದೆ.

ಆದೇಶವನ್ನು ಹೊರಡಿಸಿದ ತಕ್ಷಣವೇ ಸಕ್ಷಮ ಪ್ರಾಧಿಕಾರಗಳು 5 ವರ್ಷಗಳ ಅವಧಿ ಮೀರಿ ನಿಯೋಜನೆ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಿಬ್ಬಂದಿಗಳನ್ನು ಮಾತೃ ಇಲಾಖೆಗೆ ಹಿಂದಿರುಗಿಸಬೇಕು. ಮಾತೃ ಇಲಾಖೆಯಲ್ಲಿ ವರದಿ ಮಾಡಿಕೊಂಡ ಸಿಬ್ಬಂದಿಗಳಿಗೆ ಕೂಡಲೇ ಕೌನ್ಸಿಲಿಂಗ್ ಮುಖಾಂತರ ಇಲಾಖೆಯಲ್ಲಿ ಲಭ್ಯವಿರುವ ನಿರ್ಣಾಯಕ ಖಾಲಿ ಹುದ್ದೆಗೆ ಸ್ಥಳ ನಿಯುಕ್ತಿಗೊಳಿಸಬೇಕು.

ಆದೇಶ ಜಾರಿಗೆ ಬಂದ ತಕ್ಷಣವೇ 5 ವರ್ಷ ಅವಧಿ ಮೀರಿ ನಿಯೋಜನೆ ಮೇಲೆ ಇತರೆ ಇಲಾಖೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ನೌಕರರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳಲು ವಿಫಲರಾದಲ್ಲಿ ಕರ್ನಾಟಕ ನಾಗರೀಕ ಸೇವೆಗಳ ಸಿ.ಸಿ.ಎ. ನಿಯಮಗಳಡಿ ಸಕ್ಷಮ ಪ್ರಾಧಿಕಾರವು ಶಿಸ್ತುಕ್ರಮವನ್ನು ಜರುಗಿಸಲು ಕ್ರಮವಹಿಸಲಾಗುವುದು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News