×
Ad

ಪ್ರೊ.ಎಸ್.ಜಿ.ಸಿದ್ದರಾಮಯ್ಯರಿಗೆ 'ಶರಣಮುಕುಟ ಪ್ರಶಸ್ತಿ' ಪ್ರದಾನ

Update: 2025-05-12 00:25 IST

ಬೆಂಗಳೂರು : ರಾಜ್ಯ ಸರಕಾರ ಬಸವಣ್ಣ ಅವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಣೆ ಮಾಡಿರುವುದು ಸಂತೋಷದ ಸಂಗತಿ. ಆದರೆ, ಬಸವಣ್ಣ ವಿಶ್ವದ ಸಾಂಸ್ಕೃತಿಕ ನಾಯಕ, ಆ ಹಿನ್ನಲೆಯಲ್ಲಿ ಅದಕ್ಕೆ ಪೂರಕವಾದ ಯೋಜನೆ ರೂಪಿಸಬೇಕು ಎಂದು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್‌ನ ಅಧ್ಯಕ್ಷ ಡಾ.ಸಿ.ಸೋಮಶೇಖರ್ ಸಲಹೆ ನೀಡಿದ್ದಾರೆ.

ರವಿವಾರ ನಗರದ ಜರಗನಹಳ್ಳಿ ವೀರಶೈವ ಸಮಾಜದ ಆಶ್ರಯದಲ್ಲಿ ನಡೆದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಹಿರಿಯ ಸಾಹಿತಿ ಪ್ರೊ.ಎಸ್ .ಜಿ.ಸಿದ್ದರಾಮಯ್ಯರಿಗೆ 'ಶರಣ ಮುಕುಟ ಪ್ರಶಸ್ತಿ' ನೀಡಿ ಗೌರವಿಸಿ ಮಾತನಾಡಿದ ಅವರು, ಸರಕಾರ ಬೆಂಗಳೂರಿನಲ್ಲಿ ಅಂತರ್‌ ರಾಷ್ಟ್ರೀಯ ಬಸವ ಆಧ್ಯಾತ್ಮಿಕ ಕೇಂದ್ರವನ್ನು ಸ್ಥಾಪಿಸಲು ಹಂತಹಂತವಾಗಿ ಬಜೆಟ್‌ ನಲ್ಲಿ ಯೋಜನೆಗಳಲ್ಲಿ ಅಳವಡಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.

ತಾಲೂಕು ಮತ್ತು ಜಿಲ್ಲಾ ಕೇಂದ್ರಗಳಲ್ಲಿ ಬಸವ ಭವನಗಳನ್ನು ನಿರ್ಮಿಸಬೇಕು. ವಚನಸಾಹಿತ್ಯ ಸಂಶೋಧನೆಯ ದಿಸೆಯಲ್ಲಿ ಕೆಲಸ ಮಾಡುತ್ತಾ, ಅಪ್ರಕಟಿತ ವಚನಗಳನ್ನು ಪ್ರಕಟ ಮಾಡಬೇಕು. ಪಠ್ಯ ಪುಸ್ತಕದಲ್ಲಿ ಶರಣರ ವಿಚಾರಧಾರೆಗಳನ್ನು ಅಳವಡಿಸಬೇಕು. ಬಸವಣ್ಣರ ಹೆಸರಿನಲ್ಲಿ ಶಾಶ್ವತವಾಗಿ ಉಳಿಯುವಂತ ಸೃಜನಶೀಲವಾದ ಧಾರ್ಮಿಕ ಸಾಮಾಜಿಕ ಕೆಲಸಗಳನ್ನು ಮಾಡಿದಾಗ ಮಾತ್ರ ಸಾಂಸ್ಕೃತಿ ನಾಯಕ ಎಂದು ಘೋಷಿಸಿದ್ದಕ್ಕೆ ಸಾರ್ಥಕವಾಗುತ್ತದೆ ಎಂದು ಸೋಮಶೇಖರ್ ಹೇಳಿದರು.

ಕಾರ್ಯಕ್ರಮದಲ್ಲಿ ಹಿರಿ ಯ ಸಾಹಿತಿ ಪ್ರೊ.ಎಸ್.ಜಿ.ಸಿದ್ದರಾಮಯ್ಯ, ಪ್ರಾಧ್ಯಾಪಕಿ ಡಾ.ಕಮಲಾ, ಮೇಗಲ ಮಠದ ಬಸವರಾಜೇಂದ್ರ ಸ್ವಾಮೀಜಿ ಸಾನಿಧ್ಯ ವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News