ಪ್ರಧಾನಿ ಮೋದಿ ವಿರುದ್ಧ ಪ್ರಚೋದನಕಾರಿ ಹೇಳಿಕೆ ಪ್ರಕರಣ : ಆರೋಪಿಗೆ ನ್ಯಾಯಾಂಗ ಬಂಧನ
Update: 2025-05-13 23:29 IST
ಸಾಂದರ್ಭಿಕ ಚಿತ್ರ
ಬೆಂಗಳೂರು : ಪ್ರಧಾನಿ ಮೋದಿ ಅವರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟಿದ್ದ ಪ್ರಕರಣದಡಿ ಬಂಡೇಪಾಳ್ಯ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿರುವುದಾಗಿ ತಿಳಿಸಿದ್ದಾರೆ.
ಮಂಗನಮ್ಮನ ಪಾಳ್ಯದ ನಿವಾಸಿ ನವಾಜ್ ಎಂಬಾತ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ.
ಆರೋಪಿ ನವಾಜ್, ಯೂಟ್ಯೂಬ್ ಚಾನೆಲ್ ಹಾಗೂ ಇನ್‍ಸ್ಟಾಗ್ರಾಂ ಖಾತೆಯಲ್ಲಿ ಪ್ರಧಾನಿ ಮೋದಿಯವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿರುವ ವಿಡಿಯೋವನ್ನು ಅಪ್‍ಲೋಡ್ ಮಾಡಿದ್ದ ಎನ್ನಲಾಗಿದೆ. ಈ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಆರೋಪಿ ನವಾಜ್‍ನ ವಿರುದ್ಧ ಪ್ರಕರಣ ದಾಖಲಿಸಿರುವ ಪೊಲೀಸರು ಆತನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದು, ಸದ್ಯ ಆತನನ್ನು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಕಳುಹಿಸಲಾಗಿದೆ.