ಧಾರ್ಮಿಕ ಸಂಸ್ಥೆಗಳು ಮತ್ತು ದತ್ತಿ ಮಸೂದೆಯನ್ನು ಕಾಯ್ದಿರಿಸಿದ ರಾಜ್ಯಪಾಲರು?
Update: 2025-05-24 23:31 IST
ಬೆಂಗಳೂರು : ಕರ್ನಾಟಕ ಹಿಂದು ಧಾರ್ಮಿಕ ಸಂಸ್ಥೆಗಳು ಮತ್ತು ದತ್ತಿ(ತಿದ್ದುಪಡಿ) ಮಸೂದೆಯನ್ನು ರಾಷ್ಟ್ರಪತಿಯ ಒಪ್ಪಿಗೆಗಾಗಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಕಾಯ್ದಿರಿಸಿದ್ದಾರೆ ಎಂದು ತಿಳಿದು ಬಂದಿದೆ.
ಈ ಮಸೂದೆಯೂ ಸಾಂವಿಧಾನಿಕ ನಿರ್ಬಂಧಗಳಿಗೆ ಒಳಪಡುತ್ತಿದೆ. ಹೀಗಾಗಿ ಹೆಚ್ಚಿನ ಸಾಂವಿಧಾನಿಕ ತೊಡಕುಗಳನ್ನು ನಿವಾರಿಸಲು ಈ ಪ್ರಸ್ತಾವಿತ ಮಸೂದೆಯನ್ನು ರಾಷ್ಟ್ರಪತಿಯ ಪರಿಗಣನೆಗೆ ಕಾಯ್ದಿರಿಸವುದು ಸೂಕ್ತ ಎಂದು ರಾಜ್ಯಪಾಲರು ಸರಕಾರಕ್ಕೆ ತಿಳಿಸಿದ್ದಾರೆ ಎಂದು ಹೇಳಲಾಗಿದೆ.
ಈ ಮಸೂದೆಯನ್ನು ಬಜೆಟ್ ಅಧಿವೇಶನದಲ್ಲಿ ವಿಧಾನಮಂಡಲದ ಉಭಯ ಸದನಗಳಲ್ಲಿ ಅಂಗೀಕಾರ ಪಡೆದುಕೊಂಡು ರಾಜ್ಯಪಾಲರ ಅಂಕಿತಕ್ಕಾಗಿ ಸರಕಾರ ಕಳುಹಿಸಿಕೊಟ್ಟಿತ್ತು.