ನ್ಯಾ.ಎನ್.ವಿ.ಅಂಜಾರಿಯಾ ಅವರನ್ನು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ನೇಮಿಸಲು ಶಿಫಾರಸು
Update: 2025-05-26 23:30 IST
ಹೈಕೋರ್ಟ್ ಸಿಜೆ ಎನ್.ವಿ.ಅಂಜಾರಿಯಾ
ಬೆಂಗಳೂರು : ಕರ್ನಾಟಕ ಹೈಕೋರ್ಟ್ ಸಿಜೆ ಎನ್.ವಿ.ಅಂಜಾರಿಯಾ ಅವರಿಗೆ ಪದೋನ್ನತಿ ನೀಡಿ ಸುಪ್ರೀಂಕೋರ್ಟ್ ನ್ಯಾಯಮೂರ್ತಿಯಾಗಿ ನೇಮಿಸಲು ಸುಪ್ರೀಂ ಕೋರ್ಟ್ ಕೊಲಿಜಿಯಂನಿಂದ ರಾಷ್ಟ್ರಪತಿಗಳಿಗೆ ಶಿಫಾರಸು ಮಾಡಲಾಗಿದೆ.
ಮೂಲತಃ ಗುಜರಾತ್ ಹೈಕೋರ್ಟ್‌ನ ನ್ಯಾಯಮೂರ್ತಿಯಾಗಿದ್ದ ಎನ್.ವಿ.ಅಂಜಾರಿಯಾ, 2024ರಲ್ಲಿ ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದರು. ಇದೇ ವೇಳೆ ಕರ್ನಾಟಕ ಹೈಕೋರ್ಟ್ ಸಿಜೆಯಾಗಿ ನ್ಯಾ.ವಿಭು ಬಖ್ರು ನೇಮಿಸಲು ಶಿಫಾರಸು ಮಾಡಲಾಗಿದೆ.
ಸುಪ್ರೀಂ ಕೋರ್ಟ್ ಕೊಲಿಜಿಯಮ್‌ನಿಂದ ರಾಷ್ಟ್ರಪತಿಗೆ ಶಿಫಾರಸು ಮಾಡಿದೆ. ಹಾಲಿ ದೆಹಲಿ ಹೈಕೋರ್ಟ್ ನ್ಯಾಯಮೂರ್ತಿಯಾಗಿರುವ ನ್ಯಾ.ವಿಭು ಬಖ್ರು ಕರ್ನಾಟಕಕ್ಕೆ ಸಿಜೆಯಾಗುವ ಸಾಧ್ಯತೆ ಇದೆ.