×
Ad

ಕೆಎಸ್‍ಐಐಡಿಸಿ ವತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಚೆಕ್‍ಗಳ ಹಸ್ತಾಂತರ

Update: 2025-05-28 23:51 IST

ಬೆಂಗಳೂರು : ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮದ ವತಿಯಿಂದ ಬುಧವಾರ 17.21 ಕೋಟಿ ರೂ.ಗಳ ಸಾಮಾನ್ಯ ಡಿವಿಡೆಂಡ್, 68.69 ಕೋಟಿ ರೂ.ಗಳ ವಿಶೇಷ ಡಿವಿಡೆಂಡ್ ಹಾಗೂ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 3 ಕೋಟಿ ರೂ. ಗಳ ಮೊತ್ತದ ಚೆಕ್ ಅನ್ನು ಕೈಗಾರಿಕಾ ಸಚಿವ ಹಾಗೂ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮ(ಕೆಎಸ್‍ಐಐಡಿಸಿ)ದ ಅಧ್ಯಕ್ಷ ಎಂ.ಬಿ.ಪಾಟೀಲ್ ಬುಧವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹಸ್ತಾಂತರ ಮಾಡಿದರು.

ಈ ಸಂದರ್ಭದಲ್ಲಿ ಇಂಧನ ಸಚಿವ ಕೆ.ಜೆ.ಜಾರ್ಜ್, ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮದ ನಿರ್ದೇಶಕರಾದ ಎನ್.ಮಂಜುಳಾ, ಖುಷ್ಬೂ ಗೋಯಲ್ ಚೌಧರಿ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News