×
Ad

‘ಈ ಸಲ ಆರ್‌ಸಿಬಿ ಕಪ್ ಗೆದ್ದರೆ’ ಒಂದು ದಿನ ರಜೆ ಘೋಷಿಸಿ: ಸಿಎಂಗೆ ಅಭಿಮಾನಿ ಪತ್ರ

Update: 2025-05-30 23:47 IST

PC : @RCBTweets

ಬೆಂಗಳೂರು : ಐಪಿಎಲ್‍ನ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಪಂಜಾಬ್‍ಗೆ ಸೋಲುಣಿಸಿದ ಆರ್‌ಸಿಬಿ ಫೈನಲ್ ಪ್ರವೇಶಿಸಿದ್ದು, ಜೂನ್ 3ರಂದು ಫೈನಲ್‍ನಲ್ಲಿ ಆರ್‌ಸಿಬಿ ಕಪ್ ಗೆದ್ದರೆ ಆ ದಿನವನ್ನು ‘ಆರ್‌ಸಿಬಿ ಫ್ಯಾನ್ಸ್ ಹಬ್ಬ’ ಎಂದು ಘೋಷಿಸಿ ಒಂದು ದಿನ ಸಾರ್ವತ್ರಿಕ ರಜೆ ನೀಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆರ್‌ಸಿಬಿ ಅಭಿಮಾನಿಯೊಬ್ಬ ಪತ್ರ ಬರೆಯುವ ಮೂಲಕ ಮನವಿ ಮಾಡಿದ್ದಾರೆ.

ಗೋಕಾಕ್ ಮೂಲದ ಶಿವಾನಂದ ಮಲ್ಲನ್ನವರ್ ಎನ್ನುವ ಆರ್‌ಸಿಬಿ ಅಭಿಮಾನಿ ಪತ್ರ ಬರೆದಿದ್ದು, ಸದ್ಯ ಅಭಿಮಾನಿಯ ಮನವಿ ಪತ್ರ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ.

ಈ ಬಾರಿಯ ಐಪಿಎಲ್‍ನಲ್ಲಿ ಆರ್‌ಸಿಬಿ ಫೈನಲ್‍ಗೆ ಹೋಗಿ ಕಪ್ ಗೆದ್ದರೆ ಕರ್ನಾಟಕ ಸರಕಾರರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆ ದಿನವನ್ನು ‘ಕರ್ನಾಟಕ ರಾಜ್ಯ ಆರ್‌ಸಿಬಿ ಫ್ಯಾನ್ಸ್ ಹಬ್ಬ’ವೆಂದು ಅಧಿಕೃತವಾಗಿ ಘೋಷಣೆ ಮಾಡಬೇಕು. ಪ್ರತಿ ವರ್ಷ ಸರಕಾರಿ ರಜೆಯನ್ನು ನೀಡಬೇಕು ಎಂದು ಪತ್ರದಲ್ಲಿ ಅಭಿಮಾನಿ ಒತ್ತಾಯಿಸಿದ್ದಾರೆ.

ಕರ್ನಾಟಕ ರಾಜ್ಯೋತ್ಸವವನ್ನು ಪ್ರತಿ ಜಿಲ್ಲೆಯಲ್ಲಿ ಯಾವ ರೀತಿ ಆಚರಿಸಲಾಗುತ್ತದೋ, ಅದೇ ರೀತಿ ಆರ್‌ಸಿಬಿ ಫ್ಯಾನ್ಸ್ ಹಬ್ಬ ಆಚರಿಸಲು ಸರಕಾರ ಅನುವು ಮಾಡಿಕೊಡಬೇಕು ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಈ ಮನವಿಯನ್ನು ಸರಕಾರ ಗಂಭೀರವಾಗಿ ಪರಿಗಣಿಸಬೇಕು. ಸರಕಾರಿ ರಜೆ ಹಾಗೂ ಆರ್‌ಸಿಬಿ ಫ್ಯಾನ್ಸ್ ಹಬ್ಬ ಆಚರಿಸಲು ಅವಕಾಶ ನೀಡಬೇಕು ಎಂದು ರಾಜ್ಯದ ಪ್ರತಿ ಜಿಲ್ಲೆಯ ವತಿಯಿಂದ ಆರ್‌ಸಿಬಿ ಪರವಾಗಿ ಪತ್ರ ಬರೆದಿರುವುದಾಗಿ ಶಿವಾನಂದ ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News