×
Ad

ಪ್ರತಿಯೊಬ್ಬರೂ ಸಂವಿಧಾನ ಓದಬೇಕು : ಸಚಿವ ಕೆ.ಎಚ್.ಮುನಿಯಪ್ಪ

Update: 2025-05-31 22:05 IST

ಬೆಂಗಳೂರು : ಸಂವಿಧಾನದಲ್ಲಿ ಸಕಲರಿಗೂ ಸಮಾನ ಹಕ್ಕುಗಳನ್ನು ಕಲ್ಪಿಸಲಾಗಿದೆ. ಪ್ರತಿಯೊಬ್ಬರೂ ಸಂವಿಧಾನವನ್ನು ಓದಿ ನಮ್ಮ ಹಕ್ಕುಗಳ ಬಗ್ಗೆ ತಿಳಿದುಕೊಳ್ಳಬೇಕು ಎಂದು ಆಹಾರ ಸಚಿವ ಕೆ.ಎಚ್. ಮುನಿಯಪ್ಪ ತಿಳಿಸಿದ್ದಾರೆ.

ಶನಿವಾರ ನಗರದ ಸುಮನಹಳ್ಳಿಯ ಡಾ.ಬಾಬು ಜಗಜೀವನ್ ರಾಮ್ ಭವನದಲ್ಲಿ ರಾಜ್ಯ ಆದಿಜಾಂಬವ (ಮಾದಿಗ) ಸಂಘಟನೆಗಳ ಒಕ್ಕೂಟದ ವತಿಯಿಂದ ನಡೆದ ಸಂವಿಧಾನ ಜಾಗೃತಿ ಸಮಾವೇಶದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಸಮಾಜದಲ್ಲಿ ದ್ವೇಷ, ಅಸೂಯೆ ಬಿಟ್ಟು ಪರಸ್ಪರ ಸ್ನೇಹ ಸೌಹಾರ್ದತೆ ಬೆಳೆಸಿಕೊಂಡರೆ ಸಮಸ್ಯೆಗಳಿಂದ ಪಾರಾಗಿ ಆರೋಗ್ಯಕರ ಸಮಾಜ ನಿರ್ಮಾಣವಾಗಲಿದೆ ಎಂದು ಕೆ.ಎಚ್.ಮುನಿಯಪ್ಪ ಹೇಳಿದರು.

ಅಂಬೇಡ್ಕರ್ ಇದ್ದಂತ ದಿನಮಾನಗಳಲ್ಲಿ ಅವರು ಬದುಕುವುದೇ ಕಷ್ಟವಾಗಿತ್ತು. ಆದರೆ, ಅವರೆಂದೂ ಎದೆಗುಂದಲಿಲ್ಲ. ಅವರಿಗೆ ಬಡತನ ಒಂದು ಕಡೆಯಾದರೆ ಜಾತಿ ಪದ್ಧತಿ ಮತ್ತೊಂದು ಕಡೆ, ಇವುಗಳನ್ನು ಮೆಟ್ಟಿನಿಂತು ಶಿಕ್ಷಣ ಪಡೆದು ದೇಶದ ಸಂವಿಧಾನ ರಚಿಸುವ ಮಟ್ಟಕ್ಕೆ ಹೋಗಿದ್ದು ನಮಗೆಲ್ಲ ಆದರ್ಶಪ್ರಾಯವಾಗಿದೆ ಎಂದು ಕೆ.ಎಚ್.ಮುನಿಯಪ್ಪ ತಿಳಿಸಿದರು.

ಕಾರ್ಯಕ್ರಮದಲ್ಲಿ ಷಡಕ್ಷರಿಮುನಿ ದೇಶಿಕೇಂದ್ರ ಸ್ವಾಮೀಜಿ, ಮಾಜಿ ಸಚಿವ ಆಲ್ಕೋಡು ಹನುಮಂತಪ್ಪ, ದಲಿತ ಮುಖಂಡ ಎನ್.ಮೂರ್ತಿ, ಒಕ್ಕೂಟದ ಕಾರ್ಯಾಧ್ಯಕ್ಷ ಜಂಬೂದ್ವೀಪ ಸಿದ್ದರಾಜು, ಪ್ರಧಾನ ಕಾರ್ಯದರ್ಶಿ ಸಿ.ವಿ.ರಮೇಶ್ ಕುಮಾರ್, ಉಪಾಧ್ಯಕ್ಷ ರಾಜು ಸೇರಿದಂತೆ ಇತರರು ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News