×
Ad

ಶೀಘ್ರದಲ್ಲೇ ಬೆಂಗಳೂರು ನಗರ ಪೊಲೀಸ್ ವ್ಯಾಪ್ತಿಗೆ ಮೂರು ಗ್ರಾಮೀಣ ಠಾಣೆಗಳ ಸೇರ್ಪಡೆ

Update: 2025-06-03 20:02 IST

ಸಾಂದರ್ಭಿಕ ಚಿತ್ರ 

ಬೆಂಗಳೂರು : ರಾಜಧಾನಿ ಬೆಂಗಳೂರು ಹೊರವಲಯದ ಮೂರು ಗ್ರಾಮೀಣ ಪೊಲೀಸ್ ಠಾಣೆಗಳಾದ ಕುಂಬಳಗೋಡು, ಆವಲಹಳ್ಳಿ ಮತ್ತು ಹೆಬ್ಬಗೋಡಿ ಪೊಲೀಸ್ ಠಾಣೆಗಳನ್ನು ಬೆಂಗಳೂರು ನಗರ ಪೊಲೀಸ್ ವ್ಯಾಪ್ತಿಗೆ ಸೇರ್ಪಡೆ ಮಾಡಲಾಗಿದ್ದು, ಶೀಘ್ರದಲ್ಲೇ ಅಧಿಕಾರ ಹಸ್ತಾಂತರಗೊಳ್ಳಲಿದೆ ಎಂದು ಡಿಜಿ, ಐಜಿಪಿ ಡಾ.ಎಂ.ಎ.ಸಲೀಂ ತಿಳಿಸಿದ್ದಾರೆ.

ಮೂರು ಪೊಲೀಸ್ ಠಾಣೆಗಳಲ್ಲಿ ಈಗ ಕಾರ್ಯನಿರ್ವಹಿಸುತ್ತಿರುವ ಸಿಪಿಸಿ ಹಾಗೂ ಪಿಎಸ್ಸೈಗಳನ್ನು ನಗರ ವ್ಯಾಪ್ತಿಗೆ ಒಳಪಡಿಸಬೇಕು. ಬೆಂಗಳೂರು ಗ್ರಾಮಾಂತರ ಹಾಗೂ ರಾಮನಗರ ಜಿಲ್ಲಾ ವ್ಯಾಪ್ತಿಯಲ್ಲಿ ಕೆಲಸ ನಿರ್ವಹಿಸುತ್ತಿರುವವರು ಒಂದು ತಿಂಗಳ ಕಾಲ ಒಒಡಿ ಅಡಿಯಲ್ಲಿ ಕಾರ್ಯ ನಿರ್ವಹಿಸಲಿದ್ದಾರೆ, ಅನಂತರ ಬೆಂಗಳೂರು ನಗರ ಪೊಲೀಸರಿಗೆ ಅಧಿಕಾರ ಹಸ್ತಾಂತರವಾಗಲಿದೆ ಎಂದು ಐಜಿಪಿ ಡಾ.ಎಂ.ಎ.ಸಲೀಂ ಅವರು ಪ್ರಕಟನೆಯಲ್ಲಿ ಹೇಳಿದ್ದಾರೆ.

ಈ ಬಗ್ಗೆ ಫೆಬ್ರವರಿ 6ರಂದೇ ಸರಕಾರದಿಂದ ಆದೇಶ ಹೊರಬಿದ್ದಿತ್ತು. ಆದರೆ, ಇದುವರೆಗೂ ಮೂರು ಠಾಣೆಗಳು ಜಿಲ್ಲಾಡಳಿತದ ಅಡಿಯಲ್ಲೇ ಕಾರ್ಯ ನಿರ್ವಹಿಸುತ್ತಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News