×
Ad

ಬೇಲೂರು | ಅನೈತಿಕ ಸಂಬಂಧಕ್ಕೆ ಅಡ್ಡಿ ಆರೋಪ; ವಿಷ ಹಾಕಿ ಕುಟುಂಬದವರ ಕೊಲೆಗೆ ಯತ್ನ: ಮಹಿಳೆಯ ಬಂಧನ

Update: 2025-06-04 00:14 IST

ಸಾಂದರ್ಭಿಕ ಚಿತ್ರ

ಬೇಲೂರು : ತನ್ನ ಅನೈತಿಕ ಸಂಬಂಧಕ್ಕೆ ತೊಂದರೆಯಾಗುತ್ತಾರೆ ಎಂದು ಮಹಿಳೆ, ತನ್ನ ಪತಿ, ಮಕ್ಕಳು, ಅತ್ತೆ, ಮಾವನಿಗೆ ಊಟದಲ್ಲಿ ವಿಷ ಹಾಕಿ ಕೊಲೆ ಮಾಡಲು ಯತ್ನಿಸಿರುವ ಆರೋಪದಡಿ ಮಹಿಳೆಯನ್ನು ಬಂಧಿಸಿರುವ ಘಟನೆ ತಾಲೂಕಿನ ಕೆರಳೂರು ಗ್ರಾಮದಲ್ಲಿ ನಡೆದಿರುವುದು ವರದಿಯಾಗಿದೆ.

ಬಂಧಿತ ಆರೋಪಿಯನ್ನು ಕೆರಳೂರು ಗ್ರಾಮದ ನಿವಾಸಿ ಗಜೇಂದ್ರ ಎಂಬವರ ಪತ್ನಿ ಚೈತ್ರಾ ಎಂದು ಗುರುತಿಸಲಾಗಿದೆ. ಮಹಿಳೆಯನ್ನು ವಶಕ್ಕೆ ಪಡೆದಿರುವ ಬೇಲೂರು ಪಿಎಸ್ಐ ಎಸ್.ಜಿ. ಪಾಟೀಲ್ ಹಾಗೂ ಸಿಬ್ಬಂದಿ ವಿಚಾರಣೆಗೆ ಒಳಪಡಿಸಿದ್ದಾರೆ.

ಚೈತ್ರಾಳಿಗೆ ಶಿವು ಎಂಬಾತನೊಂದಿಗೆ ಅಕ್ರಮ ಸಂಬಂಧವಿತ್ತು ಎನ್ನಲಾಗಿದೆ. ಕೊಲೆಗೆೆ ಸಹಕಾರ ನೀಡಿದ ಶಿವು ಎಂಬಾತನ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕೆಂದು ಗಜೇಂದ್ರ ಅವರು ನೀಡಿದ ದೂರಿನ ಮೇರೆಗೆ ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News