×
Ad

ವಿಧಾನಸೌಧದ ಎದುರು ಚಾಂಪಿಯನ್ ಆರ್‌ಸಿಬಿ ತಂಡಕ್ಕೆ ಸಿಎಂ ಸಿದ್ದರಾಮಯ್ಯ ಸನ್ಮಾನ

Update: 2025-06-04 19:11 IST

ಬೆಂಗಳೂರು: ಅಹ್ಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಮಂಗಳವಾರ ರಾತ್ರಿ ನಡೆದ ಐಪಿಎಲ್ ಫೈನಲ್​ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ 6 ರನ್​ಗಳ ರೋಚಕ ಜಯ ಗಳಿಸಿ ಚಾಂಪಿಯನ್ ಆಗಿ ಹೊರಹೊಮ್ಮಿರುವ ಆರ್‌ಸಿಬಿ ತಂಡದ ಆಟಗಾರರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿನಂದನೆ ಸಲ್ಲಿಸಿದ್ದಾರೆ.

ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಂಡದ ಆಟಗಾರರಾದ ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಕೃನಾಲ್ ಪಾಂಡ್ಯ, ಮಾಯಾಂಕ್ ಅಗರ್ವಾಲ್ ಸೇರಿದಂತೆ ಎಲ್ಲ ಆಟಗಾರರಿಗೆ ಮೈಸೂರು ಪೇಟ ತೊಡಿಸಿ, ಶಾಲು ಹೊದಿಸಿ, ಹಾರ ಹಾಕಿ ಸನ್ಮಾನಿಸಿದರು.

ಅಷ್ಟರಲ್ಲೇ ಮಳೆ ಬಂದ ಕಾರಣ ತರಾತುರಿಯಲ್ಲಿ ಕಾರ್ಯಕ್ರಮ ಮುಗಿಸಿ ಆಟಗಾರರನ್ನು ಬಸ್​ನಲ್ಲಿ ಕಳುಹಿಸಲಾಯಿತು.

ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌, ಉಪಮುಖ್ಯಮಂತ್ರಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಸೇರಿದಂತೆ ಸಚಿವರು ಉಪಸ್ಥಿತರಿದ್ದರು.

ಗುಜರಾತ್​​ನ ಅಹ್ಮದಾಬಾದ್​​ನಿಂದ ಬೆಂಗಳೂರಿನ ಎಚ್​ಎಎಲ್​ ವಿಮಾನ ನಿಲ್ದಾಣಕ್ಕೆ ಬಂದಿಳಿದ ಆರ್​ಸಿಬಿ ಆಟಗಾರರನ್ನು ಸರಕಾರದ ಪರವಾಗಿ ಖುದ್ದು ಡಿಸಿಎಂ ಡಿಕೆ ಶಿವಕುಮಾರ್ ಸ್ವಾಗತಿಸಿದರು. ನಂತರ ಆರ್​ಸಿಬಿ ಆಟಗಾರರನ್ನು ವಿಶೇಷ ಬಸ್ಸುಗಳಲ್ಲಿ ಖಾಸಗಿ ಹೋಟೆಲ್‌ಗೆ ಕರೆದುಕೊಂಡು ಹೋಗಲಾಯಿತು. ಸಂಜೆ 4:30ಕ್ಕೆ ಖಾಸಗಿ ಹೋಟೆಲ್​ನಿಂದ ಬಸ್​ಗಳಲ್ಲಿ ಆರ್​ಸಿಬಿ ತಂಡ ಗೆದ್ದ ಟ್ರೋಫಿ ಸಮೇತ ವಿಧಾನಸೌಧಕ್ಕೆ ಆಗಮಿಸಿತ್ತು

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News