ಇಬ್ಬರು ಲೋಕಾಯುಕ್ತ ಅಧಿಕಾರಿಗಳಿಂದ ಕೋಟ್ಯಂತರ ರೂ. ವಸೂಲಿ : ಆರೋಪ
Update: 2025-06-12 23:44 IST
ಸಾಂದರ್ಭಿಕ ಚಿತ್ರ
ಬೆಂಗಳೂರು : ಸರಕಾರಿ ಅಧಿಕಾರಿಗಳಿಗೆ ಬೆದರಿಕೆಯೊಡ್ಡಿ ಇಬ್ಬರು ಲೋಕಾಯುಕ್ತ ಅಧಿಕಾರಿಗಳು, ಕೋಟ್ಯಂತರ ರೂ.ವಸೂಲಿ ಮಾಡಿರುವ ಗಂಭೀರ ಆರೋಪ ಕೇಳಿಬಂದಿದೆ.
ಲೋಕಾಯುಕ್ತ ಅಧಿಕಾರಿ ಶ್ರೀನಾಥ್ ಜೋಶಿ ಹಾಗೂ ನಿಂಗಪ್ಪ ಎಂಬವರು ಇದರಲ್ಲಿ ಭಾಗಿಯಾಗಿರುವುದಾಗಿ ಆರೋಪಿಸಲಾಗಿದ್ದು, ಇದೀಗ ಇಬ್ಬರನ್ನು ಲೋಕಾಯುಕ್ತದಿಂದ ಎತ್ತಂಗಡಿ ಮಾಡಲಾಗಿದೆ ತಿಳಿದು ಬಂದಿದೆ.
ಲೋಕಾಯುಕ್ತದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಇಬ್ಬರು ಐಪಿಎಸ್ ಅಧಿಕಾರಿಗಳು, ದಾಳಿ ಮಾಡುತ್ತೇವೆ ಎಂದು ಬೇರೆ ಬೇರೆ ಇಲಾಖೆಗಳ ಅಧಿಕಾರಿಗಳಿಗೆ ಬೆದರಿಕೆ ಹಾಕಿ ಏಜೆಂಟ್‌ಗಳ ಮೂಲಕ ಕೋಟ್ಯಂತರ ರೂ.ವಸೂಲಿ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಲೋಕಾಯುಕ್ತ ಇಲಾಖೆ ವಿಚಾರಣೆ ಕೈಗೊಂಡಿರುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ.